ಗುರುವಾರ , ಫೆಬ್ರವರಿ 20, 2020
27 °C

ನಡ್ಡಾ ಒಪ್ಪಿದರೆ ಸಂಪುಟ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ತಿಂಗಳಾಂತ್ಯದೊಳಗೆ ಸಂಪುಟ ವಿಸ್ತರಣೆ ನಡೆಯಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದರೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಒಪ್ಪಿಗೆ ಸೂಚಿಸಿದರೆ ಮಾತ್ರ ‘ಅರ್ಹ’ ಶಾಸಕರು ಹಾಗೂ ಬಿಜೆಪಿಯ ಸಚಿವಾಕಾಂಕ್ಷಿಗಳಿಗೆ ಭಾಗ್ಯದ ಬಾಗಿಲು ತೆರೆಯಲಿದೆ.

ಯಡಿಯೂರಪ್ಪ ಭೇಟಿಯಾಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ‘ಸಂಭಾವ್ಯ ಸಚಿವರ ಪಟ್ಟಿ ಸಿದ್ಧಪಡಿಸಿಕೊಂಡು ಬನ್ನಿ, ನಡ್ಡಾ ಅವರ ಸಮ್ಮತಿ ಪಡೆದು ವಿಸ್ತರಣೆ ಪ್ರಕ್ರಿಯೆ ಮುಗಿಸಿ’ ಎಂದು ಸಲಹೆ ನೀಡಿದ್ದಾರೆ. ನಡ್ಡಾ ಅವರು ಭೇಟಿಗೆ ಮಂಗಳವಾರ ಸಮಯ ಕೊಟ್ಟರೆ ಅಥವಾ ದೂರವಾಣಿ ಮೂಲಕ ಚರ್ಚಿಸಿ ಸಮ್ಮತಿ ಸೂಚಿಸಿದರೆ ವಿಸ್ತರಣೆ ಬುಧವಾರ (ಜ.29) ನಡೆಯಲಿದೆ. ಇಲ್ಲದಿದ್ದರೆ, ದೆಹಲಿ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ವಿಸ್ತರಣೆ ನಡೆಯದು ಎಂದು ಪಕ್ಷದ ಮೂಲಗಳು ಹೇಳಿವೆ.

ಉಪಚುನಾವಣೆ ನಡೆದು 50 ದಿನ ಕಳೆದಿದ್ದು, ಸಂಪುಟ ವಿಸ್ತರಣೆಯ ಒತ್ತಡ ಹೆಚ್ಚುತ್ತಿದೆ. ಸೋತವರಿಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಬಿಜೆಪಿ ನಾಯಕರು ಈಗಾಗಲೇ ರವಾನಿಸಿದ್ದಾರೆ. ಗೆದ್ದಿರುವ 11 ಜನರ ಪೈಕಿ ಯಾರಿಗೆ ಸ್ಥಾನ ಸಿಗಲಿದೆ ಎಂಬುದು ಖಚಿತವಾಗಿಲ್ಲ. ಪಕ್ಷದಲ್ಲಿ ಅಸಮಾಧಾನ ನಿವಾರಿಸಬೇಕಾದರೆ ಅನೇಕ ಬಾರಿ ಪಕ್ಷದ ಚಿಹ್ನೆಯಡಿ ಗೆದ್ದಿರುವ ಹಿರಿಯರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ವರಿಷ್ಠರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ, ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಸಚಿವ ಸ್ಥಾನಕ್ಕಾಗಿ ಬಿಜೆಪಿಯ ಹಿರಿಯರು ಲಾಬಿ ಆರಂಭಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು