ಇದೇ 12ಕ್ಕೆ ಸಂಪುಟ ವಿಸ್ತರಣೆ, ಪಕ್ಷೇತರರಿಗೆ ಸಚಿವ ಸ್ಥಾನ ಬಹುತೇಕ ಖಚಿತ

ಬುಧವಾರ, ಜೂನ್ 19, 2019
23 °C

ಇದೇ 12ಕ್ಕೆ ಸಂಪುಟ ವಿಸ್ತರಣೆ, ಪಕ್ಷೇತರರಿಗೆ ಸಚಿವ ಸ್ಥಾನ ಬಹುತೇಕ ಖಚಿತ

Published:
Updated:

ಬೆಂಗಳೂರು: ರಾಜ್ಯ ಸರ್ಕಾರ ಇದೇ 12ರಂದು (ಬುಧವಾರ) ಸಂಪುಟ ವಿಸ್ತರಣೆ ಮಾಡಲಿದೆ. ಬೆಳಿಗ್ಗೆ 11.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. 

ಪಕ್ಷೇತರ ಶಾಸಕರಾದ ಆರ್.ಶಂಕರ್ ಹಾಗೂ ಎಚ್. ನಾಗೇಶ ಅವರು ಸಂಪುಟ ಸೇರುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ. 

‘ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ.  ಅವರು ಪ್ರಮಾಣ ವಚನ ಬೋಧನೆಗೆ ಬುಧವಾರ ಜೂನ್ 12ರಂದು ಬೆಳಿಗ್ಗೆ 11.30 ಕ್ಕೆ ಸಮಯ ನಿಗದಿ ಪಡಿಸಿದ್ದಾರೆ’ ಎಂದು ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.  

ಸದ್ಯ ಸಂಪುಟದಲ್ಲಿ ಖಾಲಿ ಇರುವ ಮತ್ತೊಂದು ಸ್ಥಾನದ ಭರ್ತಿ ಮಾಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. 
 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !