ಗುರುವಾರ , ಫೆಬ್ರವರಿ 20, 2020
28 °C

ಮಾಸಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ : ಬಿಎಸ್ ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಮಾಸಾಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಹೊಳೆನರಸೀಪುರ ತಾಲ್ಲೂಕಿನ ಸಿಂಗನಕುಪ್ಪೆ ಗ್ರಾಮದ ಹೆಲಿಪ್ಯಾಡ್‌‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ದಾವೋಸ್ ಭೇಟಿ‌ ಅತ್ಯಂತ ಫಲಪ್ರದವಾಗಿದೆ. ರಾಜ್ಯದಲ್ಲಿ ಅನೇಕರು ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಹಲವು ಕೈಗಾರಿಕೋದ್ಯಮಿಗಳು ರಾಜ್ಯಕ್ಕೆ ಬರಲು ಒಪ್ಪಿದ್ದಾರೆ ಎಂದರು. 40ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿನಂತಿಸಿದ್ದೇನೆ ಎಂದು ಹೇಳಿದರು

ಎಸ್.‌ಎಂ.ಕೃಷ್ಣ ಅವರ ನಂತರ 16 ವರ್ಷಗಳು ಕಳೆದ ಮೇಲೆ ತಾವು ದಾವೋಸ್‌ಗೆ ಹೋಗಿದ್ದು ತುಂಬಾ ಉಪಯುಕ್ತವಾಯಿತು‌. ಬಹಳ ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆ ಅಭಿವೃದ್ಧಿ ಮಾಡಲು ಭರವಸೆ ದೊರೆತಿದೆ. ಇದರಿಂದ ಕೃಷಿ, ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲೂ ಅನುಕೂಲ ಆಗಲಿದೆ ಎಂದರು.

ಮೈಸೂರು ಜಿಲ್ಲೆಯ ದೇವಿತಂದ್ರೆ ಗ್ರಾಮದಲ್ಲಿ ದೇವಾಲಯದ ರಾಜಗೋಪುರ ಉದ್ಘಾಟನೆ ಮುಗಿಸಿ, ಕೊಡಗಿಗೆ ತೆರಳುವುದಾಗಿ ಹೇಳಿದ ಅವರು ಕೊಡಗಿನಲ್ಲಿ 1500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು