ಸೆ. 25ರೊಳಗೆ ಸಂಪುಟ ವಿಸ್ತರಣೆ: ಈಶ್ವರ ಖಂಡ್ರೆ

7

ಸೆ. 25ರೊಳಗೆ ಸಂಪುಟ ವಿಸ್ತರಣೆ: ಈಶ್ವರ ಖಂಡ್ರೆ

Published:
Updated:

ಬೆಂಗಳೂರು: ಬಹಳ ದಿನಗಳಿಂದ ನಿರೀಕ್ಷಿಸಲಾಗುತ್ತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಈ ತಿಂಗಳ 25ರ ವೇಳೆಗೆ ನಡೆಯಲಿದೆ.

‘ಸಂಪುಟ ವಿಸ್ತರಣೆ ಇನ್ನಷ್ಟು ವಿಳಂಬವಾಗುವುದಿಲ್ಲ. ಈ ತಿಂಗಳ 25ರೊಳಗೆ ಆಗಲಿದೆ’ ಎಂದು ಪ್ರದೇಶ ಕಾಂಗ್ರೆಸ್‌ ಸಮಿತಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾಧ್ಯಮ ಪ್ರತಿನಿಧಿಗಳಿಗೆ ಶುಕ್ರವಾರ ತಿಳಿಸಿದರು. ‘ಕಾಂಗ್ರೆಸ್‌ ಪಕ್ಷದೊಳಗಿನ ಕಿತ್ತಾಟದಿಂದ ವಿಸ್ತರಣೆ ವಿಳಂಬವಾಗುವುದೇ?’ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.

‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯುರೋಪ್‌ ‍ಪ್ರವಾಸದಿಂದ ಹಿಂತಿರುಗಿದ ಬಳಿಕ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ತಿಳಿಸಿದರು. ಶನಿವಾರ ಸಂಜೆ ಸಿದ್ದರಾಮಯ್ಯ ನಗರಕ್ಕೆ ವಾಪಸ್‌ ಆಗಲಿದ್ದಾರೆ.

ಸಂಪುಟದಲ್ಲಿ ಏಳು ಸ್ಥಾನಗಳು ಖಾಲಿ ಉಳಿದಿದ್ದು, ಕಾಂಗ್ರೆಸ್‌ನ ಆರು ಹಾಗೂ ಜೆಡಿಎಸ್‌ ಒಬ್ಬರನ್ನು ಸೇರಿಸಿಕೊಳ್ಳಲು ಅವಕಾಶವಿದೆ. ಆದರೆ, ಜಾರಕಿಹೊಳಿ ಸಹೋದರರ ಅಸಮಾಧಾನದಿಂದ ವಿಸ್ತರಣೆ ಮುಂದಕ್ಕೆ ಹೋಗಬಹುದು ಎಂದು ಕಾಂಗ್ರೆಸ್‌ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

 

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !