ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮಿ ಸಿದ್ದಾರ್ಥ ಸಾವಿನ ಪ್ರಕರಣ: ಪೊಲೀಸರ ಕೈಸೇರಿದ ಎಫ್‌ಎಸ್‌ಎಲ್‌ ವರದಿ

Last Updated 23 ಆಗಸ್ಟ್ 2019, 7:34 IST
ಅಕ್ಷರ ಗಾತ್ರ

ಮಂಗಳೂರು: ಕೆಫೆ ಕಾಫಿ ಡೇಉದ್ಯಮಿ ಸಿದ್ದಾರ್ಥ ಅವರ ಸಾವಿನ ‍ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ವರದಿ ತನಿಖಾ ತಂಡದ ಕೈಸೇರಿದೆ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಡಾ.‍ಪಿ.ಎಸ್‌.ಹರ್ಷ ತಿಳಿಸಿದರು.

ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಎಫ್‌ಎಸ್‌ಎಸಲ್‌ ವರದಿ ಪ್ರಕರಣದ ತನಿಖಾಧಿಕಾರಿಯಾಗಿರುವ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಕೋದಂಡರಾಮ ಅವರಿಗೆ ತಲುಪಿದೆ. ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸಿದ್ದಾರ್ಥ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರಿಗೆ ವರದಿಯನ್ನು ನೀಡಿರುವ ತನಿಖಾಧಿಕಾರಿ, ವೈದ್ಯರ ಅಭಿಪ್ರಾಯ ಕೋರಿದ್ದಾರೆ’ ಎಂದರು.

ವೈದ್ಯರು ಎಫ್ಎಸ್‌ಎಲ್‌ ವರದಿಯನ್ನು ಅಧ್ಯಯನ ಮಾಡಿದ ಬಳಿಕ ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯನ್ನು ನೀಡುತ್ತಾರೆ. ವೈದ್ಯರ ಅಂತಿಮ ವರದಿಯನ್ನು ಆಧರಿಸಿ ತನಿಖಾಧಿಕಾರಿ ತೀರ್ಮಾನಕ್ಕೆ ಬರುತ್ತಾರೆ. ಎಲ್ಲ ಆಯಾಮಗಳಿಂದಲೂ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಸಿದ್ದಾರ್ಥ ಅವರು ಜುಲೈ 29ರಂದು ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದರು. ಜುಲೈ 31ರಂದು ಹೊಯಿಗೆ ಬಜಾರ್‌ ಬಳಿ ನದಿ ತೀರದಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT