ಮಂಗಳವಾರ, ಮಾರ್ಚ್ 2, 2021
29 °C

ಬಜೆಟ್ ಮರುಪರಿಶೀಲನೆಗೆ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಿರಿ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸುವುದೇನೆಂದರೆ, ಈಗಿನ ಆರ್ಥಿಕ ಸಂಕಷ್ಟದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಾವು ಶ್ರಮಿಕರ ಪರವಾಗಿ ತೆಗೆದುಕೊಂಡ ನಿರ್ಧಾರಕ್ಕೆ ಕಾಂಗ್ರೆಸ್ ಪಕ್ಷ ಅಭಿನಂದಿಸುತ್ತದೆ. ವಿಶೇಷವಾಗಿ ಬಜೆಟ್ ಅಧಿವೇಶನವನ್ನು ಕರೆಯಬೇಕು ಎಂದು ಮನವಿ ಮಾಡುತ್ತೇವೆ. ಬಜೆಟ್ ಮರುಪರಿಶೀಲನೆ ಮಾಡುವ ಅಗತ್ಯವಿದೆ. ಎಲ್ಲ ವರ್ಗದ ಜನರಿಗೆ ಸಹಾಯ ಮಾಡಬೇಕು. ವೃತ್ತಿಪರರಿಗೆ, ವೃತ್ತಿಯನ್ನು ಉಳಿಸಿಕೊಂಡು ಬಂದಿರುವವರಿಗೆ, ಕಾರ್ಮಿಕರು, ವೈದ್ಯರು, ಚಾಲಕರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಸಹಾಯ ಮಾಡುವ ಅಗತ್ಯವಿದೆ. ಇದಕ್ಕಾಗಿ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಹೀಗಾಗಿ ಕೂಡಲೇ ಬಜೆಟ್ ಮರುಪರಿಶೀಲನೆ ಮಾಡುವ ಅಗತ್ಯವಿದೆ ಎಂದು ವಿಡಿಯೊದಲ್ಲಿ ತಿಳಿಸಿದ್ದಾರೆ.  

ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಆರ್ಥಿಕ ನೆರವಿನ ಅಗತ್ಯವಿದೆ. ಈ ಅಧಿವೇಶನ ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಲಿದೆ. ದೇಶ ಕಟ್ಟುತ್ತಿರುವ ನಮ್ಮ ಸೋದರ, ಸೋದರಿಯರ ಹಿತ ಕಾಪಾಡುವ ಹೊಣೆ ನಮ್ಮೆಲ್ಲರದಾಗಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು