ಬೆಂಗಳೂರು: ‘ಕುಡಿಯುವ ನೀರಿನ ಸಮಸ್ಯೆಗಳಿಗೆ ತಕ್ಷಣ ನೆರವು ನೀಡಲು ಎಲ್ಲ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಲ್ ಸೆಂಟರ್‌ಗಳನ್ನು ತೆರೆಯಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕಾಲ್ ಸೆಂಟರ್ ಸಂಖ್ಯೆಗೆ ಕರೆ ಮಾಡಿ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದು. ಈ ದೂರುಗಳ ಬಗ್ಗೆ ತಕ್ಷಣವೇ ಸ್ಥಳೀಯ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಕಾಲ್ ಸೆಂಟರ್ ದೂರವಾಣಿ ಸಂಖ್ಯೆಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ (rdpr.kar.nic.in) ಪ್ರಕಟಿಸಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಇದರಿಂದ ಜನ, ಜಾನುವಾರು ಪರಿತಪಿಸುವ ವಾತಾವರಣ ಸೃಷ್ಟಿಯಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.