ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇವಿಎಂ ಹ್ಯಾಕ್ ಸಾಧ್ಯವಿಲ್ಲ: ರೂಪಾ ಟ್ವೀಟ್

Last Updated 22 ಮೇ 2019, 18:33 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆ ಚುನಾವಣೋತ್ತರ ಸಮೀಕ್ಷೆಗಳು ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಯುಪಿಎ ಅಂಗ ಪಕ್ಷಗಳುವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದರೆ, ‘ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ’ ಎಂದು ರಾಜ್ಯದ ಐಪಿಎಸ್ ಅಧಿಕಾರಿ ಡಿ.ರೂಪಾ ಟ್ವೀಟ್ ಮಾಡಿದ್ದಾರೆ.

‘ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂಬ ವಿಚಾರ ಎಲ್ಲ ಐಎಎಸ್ ಅಧಿಕಾರಿಗಳು, ಆಯಾ ರಾಜ್ಯಗಳ ಆಡಳಿತ ಸೇವೆಯಲ್ಲಿರುವ ಅಧಿಕಾರಿಗಳಿಗೂ ಗೊತ್ತಿದೆ. ಇವರೆಲ್ಲ ಚುನಾವಣೆ ಅಧಿಕಾರಿಗಳಾಗಿ, ಸಹಾಯಕ ಚುನಾವಣೆ ಅಧಿಕಾರಿಗಳಾಗಿ ಕೆಲಸ ನಿರ್ವಹಿಸಿದ್ದಾರೆ. ಹ್ಯಾಕ್ ಮಾಡಲು ಅವಕಾಶ ನೀಡಿ, ತಮ್ಮ ಉದ್ಯೋಗವನ್ನೇ ಅಪಾಯಕ್ಕೆ ಸಿಲುಕಿಸಿಕೊಳ್ಳಲು ಸಾಧ್ಯವೆ? ಎಂದು ಪ್ರಶ್ನಿಸಿದ್ದಾರೆ.

ಈ ಟ್ವೀಟ್‌ಗೆ ಮೂರು ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ನೂರಾರು ಮಂದಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT