150 ಕಡೆ ಶುರುವಾಗದ ಇಂದಿರಾ ಕ್ಯಾಂಟೀನ್‌

7

150 ಕಡೆ ಶುರುವಾಗದ ಇಂದಿರಾ ಕ್ಯಾಂಟೀನ್‌

Published:
Updated:

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ ಇಂದಿರಾ ಕ್ಯಾಂಟೀನ್‌ 150 ಕಡೆಗಳಲ್ಲಿ ಇನ್ನೂ ಆರಂಭವಾಗಿಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ಕ್ಯಾಂಟೀನ್‌ ಆರಂಭಿಸಲಾಗಿತ್ತು. ಇಲ್ಲಿನ ಯಶಸ್ಸನ್ನು ನೋಡಿಕೊಂಡು ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ 249 ಕ್ಯಾಂಟೀನ್‌ ಆರಂಭಿಸಲು ನಿರ್ಧರಿಸಲಾಗಿತ್ತು. ಅದಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿತ್ತು.

ಚುನಾವಣೆಗೆ ಮೊದಲು 72 ಕಡೆಗಳಲ್ಲಿ ಕ್ಯಾಂಟೀನ್‌ ಶುರುವಾಗಿತ್ತು. ಕಾಂಗ್ರೆಸ್‌ ಸರ್ಕಾರದ ಎಲ್ಲ ಜನಪರ ತೀರ್ಮಾನಗಳನ್ನು ಮುಂದುವರಿಸುವುದಾಗಿ ಕುಮಾರಸ್ವಾಮಿ ಪ್ರಕಟಿಸಿದ್ದರು. ಐದು ತಿಂಗಳ ಅವಧಿಯಲ್ಲಿ 27 ಕಡೆಗಳಲ್ಲಷ್ಟೇ ಕಾಮಗಾರಿ ಪೂರ್ಣಗೊಂಡಿದೆ. 93 ಕ್ಯಾಂಟೀನ್‌ಗಳ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. 14 ಕಡೆಗಳಲ್ಲಿ ಜಾಗವೇ ಸಿಕ್ಕಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !