ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಕರ ಅಪಘಾತ: ಕಾರು ಪಲ್ಟಿಯಾಗಿ ಐದು ಮಂದಿ ಸ್ಥಳದಲ್ಲೇ ಸಾವು 

Last Updated 28 ಜೂನ್ 2019, 13:37 IST
ಅಕ್ಷರ ಗಾತ್ರ

ತುಮಕೂರು: ಕುಣಿಗಲ್ ತಾಲ್ಲೂಕು ಸಿದ್ದಾಪುರ ಬಳಿ ಕಾರು ಪಲ್ಟಿಯಾಗಿ 5 ಮಂದಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಯಡಿಯೂರುನಿಂದ ಬೆಂಗಳೂರಿಗೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಘಟನೆಯಲ್ಲಿ 4 ಮಹಿಳೆಯರು, ಒಬ್ಬ ಪುರುಷ ಮೃತಪಟ್ಟಿದ್ದಾರೆ. ಬೆಂಗಳೂರಿನ ಸಂಜಯನಗರ ನಿವಾಸಿಗಳಾಗಿದ್ದು, ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಮರಳಿ ಬೆಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದಿದೆ.

ಇಬ್ಬರು ಮಕ್ಕಳು ಸೇರಿ ಹನ್ನೊಂದು ಜನ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಗೊಂಡ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮೃತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತಪಟ್ಟವರ ವಿವರ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT