ಬುಧವಾರ, ಏಪ್ರಿಲ್ 1, 2020
19 °C

ಗೋವಾದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಶಾಸಕ ಅರವಿಂದ ಬೆಲ್ಲದ ಕಾರು ಅಪಘಾತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಖಾನಾಪುರ: ಗೋವಾದಿಂದ ಹುಬ್ಬಳ್ಳಿಯತ್ತ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರಿದ್ದ ಕಾರು ಜಾಂಬೋಟಿ ಸಮೀಪದ ಬೈಲೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.

ಬೆಲ್ಲದ ಮತ್ತು ಅವರ ಸ್ನೇಹಿತರು ಸೇರಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಏರ್ ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಕಾರು ರಸ್ತೆ ಬದಿಯ ತಡೆಗೋಡೆಗೆ ತಾಗಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರು ಹಾಗೂ ಪ್ಯಾಟ್ರೋಲಿಂಗ್‌ನಲ್ಲಿದ್ದ (ಗಸ್ತು) ಪೊಲೀಸರು, ಕಾರಿನಲ್ಲಿದ್ದವರನ್ನು ಹೊರಗೆ ತೆಗೆದು ಬೇರೊಂದು ವಾಹನದಲ್ಲಿ ಕಳುಹಿಸಿಕೊಟ್ಟಿದ್ದಾರೆ.

ಖಾನಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು