ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಟಿ.ರವಿ ವಿರುದ್ಧದ ಪ್ರಕರಣ ರದ್ದು

ಅಕ್ರಮವಾಗಿ ನಿವೇಶನ ಪಡೆದ ಆರೋಪ
Last Updated 21 ಮಾರ್ಚ್ 2019, 16:49 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮವಾಗಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಬಿಜೆಪಿ ಶಾಸಕ ಸಿ.ಟಿ.ರವಿ, ಅವರ ಪತ್ನಿ ಪಲ್ಲವಿ ರವಿ ಹಾಗೂ ಸಂಬಂಧಿಕರಾದ ತೇಜಸ್ವಿನಿ ಮತ್ತು ಅವರ ಪತಿ ತೇಜಸ್ವಿನಿ ಸುದರ್ಶನ್‌ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಈ ಕುರಿತಂತೆ ರವಿ ಸೇರಿದಂತೆ ನಾಲ್ವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಮಾನ್ಯಮಾಡಿದೆ.

‘ರವಿ ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಕರ್ನಾಟಕ ಗೃಹ ಮಂಡಳಿಯಿಂದ (ಕೆಎಚ್‌ಬಿ) ಮೂರು ನಿವೇಶನ ಮಂಜೂರು ಮಾಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿ ಆರ್.ದೇವಿಪ್ರಸಾದ್‌ ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಇದರನ್ವಯ ಚಿಕ್ಕಮಗಳೂರು ಲೋಕಾಯುಕ್ತ ನ್ಯಾಯಾಲಯ ನಾಲ್ವರಿಗೆ ಸಮನ್ಸ್‌ ಜಾರಿಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT