ಶುಕ್ರವಾರ, ಏಪ್ರಿಲ್ 23, 2021
30 °C

ಟಿಪ್ಪು ಜಯಂತಿ ವೇಳೆ ‍ಪ್ರತಿಭಟನೆ: ಪ್ರಕರಣ ವಾಪಸ್‌?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವೇಳೆ ನಡೆದಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ 120ಕ್ಕೂ ಅಧಿಕ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂದೆಗೆದುಕೊಳ್ಳುವ ಸಾಧ್ಯತೆ ಇದೆ.

2015ರಿಂದ 2018ರ ನಡುವೆ ನಡೆದ ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿದ್ದವು. ಕೊಡಗು, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ, ದಾವಣಗೆರೆ ಮೊದಲಾದ ಜಿಲ್ಲೆಗಳಲ್ಲಿ ಸಂಭವಿಸಿದ ಘರ್ಷಣೆಗಳಿಗೆ ಸಂಬಂಧಿಸಿದಂತೆ 120ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದವು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನವೆಂಬರ್‌ 10ರಂದು ನಡೆಯಬೇಕಾಗಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ್ದಲ್ಲದೆ, ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ನಿಟ್ಟಿನಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಿಂದ ಅಭಿಪ್ರಾಯ ಕೇಳಿತ್ತು.

ಈಚೆಗೆ ಮುಖ್ಯಮಂತ್ರಿ ಅವರು ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ವೇಳೆಯೂ ಈ ವಿಷಯ ಚರ್ಚೆಗೆ ಬಂದಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು