ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಮಾನಿಕ ತರಬೇತಿಯಲ್ಲೂ ಜಾತಿ ತಾರತಮ್ಯ

ಯುವ ಸಬಲೀಕರಣ ಇಲಾಖೆಯ ಅಂದಾಜು ಸಮಿತಿ ವರದಿ ಮಂಡನೆ
Last Updated 31 ಜುಲೈ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು:ಜಕ್ಕೂರು ವಿಮಾನ ನಿಲ್ದಾಣದ ಸರ್ಕಾರಿ ವೈಮಾನಿಕ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆ ಯುತ್ತಿರುವ ವಿದ್ಯಾರ್ಥಿಗಳನ್ನು ಕೀಳಾಗಿ ನಡೆಸಿಕೊಂಡು, ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನಸಭೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದ ಅಂದಾಜು ಸಮಿತಿಯು ಅಸಮಾಧಾನ ವ್ಯಕ್ತಪಡಿಸಿದೆ.

ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸಗೌಡ ವಿಧಾನಸಭೆಯಲ್ಲಿಬುಧವಾರ ಮೊದಲನೇ ವರದಿ ಮಂಡಿಸಿದ್ದು, ಈ ವರದಿಯಲ್ಲಿ ತಾರತಮ್ಯ ಮಾಡುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

51 ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದು, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳನ್ನು ಕೀಳಾಗಿ ನಡೆಸಿಕೊಂಡಿರುವ ಬಗ್ಗೆ ಕೆಲವರು ಸಮಿತಿಗೆ ದೂರು ನೀಡಿದ್ದಾರೆ. ಇಲಾಖೆ ವತಿಯಿಂದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಮಿತಿಯು ಶಿಫಾರಸು ಮಾಡಿದೆ.

ಬಹುಮಾನ ಮೊತ್ತ ಹೆಚ್ಚಳ: ಕೆಳ ಹಂತದ ಕ್ರೀಡಾಪಟುಗಳಿಗೆ ಕೊಡುವ ಬಹುಮಾನದ ಮೊತ್ತ ಹಾಗೂ ನಗದು ಪುರಸ್ಕಾರಕ್ಕೆ ಅರ್ಹರಾದ ಕ್ರೀಡಾಪಟುಗಳಿಗೆ ನೀಡುವ ನೆರವಿನ ಅನುದಾನವನ್ನು ಹೆಚ್ಚಿಸಲು ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಹೊಸದಾಗಿ ಸೃಷ್ಟಿಸುವಂತೆ ಶಿಫಾರಸು ಮಾಡಲಾಗಿದೆ.

ಬೆಳಗಾವಿಯಲ್ಲಿ ಕ್ರೀಡಾ ಅಕಾಡೆಮಿ ಸ್ಥಾಪಿಸುವುದು, ಪುಣೆ ಮಾದರಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಒಳಾಂಗಣ ಕ್ರೀಡಾಂಗಣವನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ನಿರ್ಮಿಸಿ, ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಬಾಗಲಕೋಟೆಯಲ್ಲಿ ಈಜುಕೊಳ ನಿರ್ಮಾಣದ ಕೆಲಸವನ್ನು ತಕ್ಷಣ ಆರಂಭಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಒಳಾಂಗಣ ಕ್ರೀಡಾಂಗಣನಿರ್ಮಿಸಲು ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಸೇರಿಸಲು ಸಲಹೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT