ಕೇಂದ್ರಕ್ಕೆ ಮತ್ತೊಮ್ಮೆ ಪತ್ರ: ಕುಮಾರಸ್ವಾಮಿ

7
ಕಾವೇರಿ ನೀರು ನಿಯಂತ್ರಣ ಸಮಿತಿ

ಕೇಂದ್ರಕ್ಕೆ ಮತ್ತೊಮ್ಮೆ ಪತ್ರ: ಕುಮಾರಸ್ವಾಮಿ

Published:
Updated:

ಬೆಂಗಳೂರು: ‘ಕಾವೇರಿ ನೀರು ನಿಯಂತ್ರಣ ಮಂಡಳಿ ರಚನೆಯಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ನಮ್ಮ ಹಕ್ಕು ಕಿತ್ತುಕೊಳ್ಳಲಾಗಿದೆ. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪತ್ರ ಬರೆಯುತ್ತೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಲ ವಿವಾದಗಳನ್ನು ನಿರ್ವಹಿಸಲು ನೀರಾವರಿ ತಜ್ಞರನ್ನು ನೇಮಕ ಮಾಡಿಕೊಂಡಿದ್ದೇನೆ. ಅವರು ವಿಷಯದ ಕುರಿತು ಅಧ್ಯಯನ ಮಾಡುತ್ತಿದ್ದಾರೆ. ಅಡ್ವೊಕೇಟ್‌ ಜನರಲ್‌ ಅವರ ಸಭೆ ಕರೆದಿದ್ದು, ಚರ್ಚೆ ಮಾಡಿ ಕಾನೂನು ಹೋರಾಟ ಮಾಡುತ್ತೇವೆ’ ಎಂದರು.

‘ಕೇಂದ್ರ ಜಲಸಂಪನ್ಮೂಲ ಸಚಿವರ ಗಮನವನ್ನೂ ಸೆಳೆದಿದ್ದೇನೆ. 15 ದಿನ ಬಿಟ್ಟು ಭೇಟಿಗೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ. ಲೋಪ ಸರಿಪಡಿಸಲು ಕೋರಿದ್ದೇನೆ’ ಎಂದರು.

‘ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಸಾಕಷ್ಟು ಅನ್ಯಾಯ ಆಗಿದೆ. ಆದರೂ, ನಾವು ಗೌರವ ಕೊಟ್ಟಿದ್ದೇವೆ. ಇದು ನಮ್ಮ ದೌರ್ಬಲ್ಯ ಅಲ್ಲ. ರಾಜ್ಯ ಯಾವತ್ತೂ ಕಾನೂನು ಉಲ್ಲಂಘನೆ ಮಾಡಿ‌ಲ್ಲ. ಜಲ ವಿವಾದದಿಂದಾಗಿ ಜನರು ಹಲವು ರೀತಿಯ ಸಮಸ್ಯೆ ಎದುರಿಸಿದ್ದಾರೆ’ ಎಂದರು.

‘ಅಂತರ್‌ರಾಜ್ಯ ಜಲವಿವಾದ ಕಾಯ್ದೆಯನ್ನು ತಿರುಚಲಾಗಿತ್ತು. ಅದರ ಅನುಷ್ಠಾನದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ. ಅದನ್ನು ಸರಿಪಡಿಸಬೇಕಿದೆ’ ಎಂದರು.

 

ಬರಹ ಇಷ್ಟವಾಯಿತೆ?

 • 1

  Happy
 • 5

  Amused
 • 2

  Sad
 • 2

  Frustrated
 • 1

  Angry

Comments:

0 comments

Write the first review for this !