ಗುರುವಾರ , ಡಿಸೆಂಬರ್ 3, 2020
20 °C

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ ಸೋಮವಾರ ಆರಂಭಗೊಂಡಿದೆ. ಕೇಂದ್ರ ಜಲ ಆಯೋಗದ ಅಧ್ಯಕ್ಷ ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಕರ್ನಾಟಕದಿಂದ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ರಾಕೇಶ್‌ ಸಿಂಗ್ ಭಾಗಿಯಾಗಿದ್ದಾರೆ.

‌ಸಭೆಯಲ್ಲಿ ಚರ್ಚಿಸಲಿರುವ ವಿಷಯಗಳು:

* ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಕಾರ್ಯ ಚಟುವಟಿಕೆ ಹಾಗೂ ನಿಯಮಾವಳಿಗಳನ್ನು ರೂಪಿಸುವುದು

* ಕಾವೇರಿ ನದಿಯ ಎಂಟು ಜಲಾಶಯಗಳ ನಿರ್ವಹಣೆ ಕುರಿತು ಚರ್ಚೆ

* ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ನಿಯೋಜನೆ

* ಸಿಬ್ಬಂದಿಯ ಸೇವಾ ನಿಯಮಗಳು ರೂಪಿಸುವುದು

* ಪ್ರಾಧಿಕಾರದ ಕಾರ್ಯ ನಿರ್ವಹಣೆಗೆ ಅಗತ್ಯವಿರುವ ಹಣಕಾಸಿನ ಕ್ರೋಢೀಕರಣ

* ಪ್ರಾಧಿಕಾರದ ಕಚೇರಿಗಾಗಿ ಸ್ಥಳ ನಿಯೋಜನೆ, ಪೀಠೋಪಕರಣ, ಕಂಪ್ಯೂಟರ್, ಮತ್ತಿತರ ಅಧುನಿಕ ಸಲಕರಣೆಗಳ ವ್ಯವಸ್ಥೆ, ಮೂಲ ಸೌಲಭ್ಯ ಹಾಗೂ ವಾಹನ ವ್ಯವಸ್ಥೆ 

* ಕಾವೇರಿ ನೀರು ನಿಯಂತ್ರಣ ಸಮಿತಿಗೆ ನಿರ್ದೇಶನ ನೀಡುವ ಬಗ್ಗೆ

* ನದಿ ವ್ಯಾಪ್ತಿಯಲ್ಲಿರುವ ಕೇರಳದ ಬಾಣಾಸುರ ಸಾಗರ , ರಾಜ್ಯದ ಹೇಮಾವತಿ, ಕಬಿನಿ, ಹಾರಂಗಿ, ಕೃಷ್ಣರಾಜ ಸಾಗರ, ತಮಿಳುನಾಡಿನ ಭವಾನಿ, ಅಮರಾವತಿ ಮತ್ತು ಮೆಟ್ಟೂರು ಜಲಾಶಯಗಳ ಒಳ ಮತ್ತು ಹೊರ ಹರಿವಿನ ಮಾಹಿತಿ ಸಂಗ್ರಹ

* ನೀರಿನ ಬಳಕೆ, ಸಂಗ್ರಹ ಸಾಮರ್ಥ್ಯ, ಮಳೆಯ ಪ್ರಮಾಣ, ಬೆಳೆಯ ವ್ಯಾಪ್ತಿ, ಮತ್ತು ಸ್ಥಳೀಯ ಹಾಗೂ ಕೈಗಾರಿಕಾ ಅಗತ್ಯತೆ ಈ ಸಮಿತಿಯಿಂದಲೇ ಕಾರ್ಯ ನಿರ್ವಹಿಸುವುದು

* ಜೂನ್ 1ರಿಂದ ಜೂನ್ 30 ರವರೆಗೆ ಸಂಗ್ರಹವಾಗಿರುವ ನೀರಿನ ಪ್ರಮಾಣದ ಮಾಹಿತಿ, ಈ ಅವಧಿಯಲ್ಲಿ ಮಳೆಯ ಕೊರತೆ ಇದ್ದಲ್ಲಿ ಆ ಬಗ್ಗೆ ಚರ್ಚೆ, ಮಾಸಿಕ 10 ದಿನಗಳಂತೆ ಮೂರು ಭಾಗಗಳಲ್ಲಿ ಮಾಹಿತಿ ಸಂಗ್ರಹಿಸಿ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಸೂಚಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು