ಭಾನುವಾರ, ಆಗಸ್ಟ್ 25, 2019
28 °C

ತಮಿಳುನಾಡಿಗೆ ಮತ್ತೆ 5 ದಿನ ನೀರು

Published:
Updated:

ಬೆಂಗಳೂರು: ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ಮುಂದಿನ ಐದು ದಿನ, 7 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಗುರುವಾರ ನಡೆದ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಜುಲೈ 25ರಂದು ನಡೆದ ಸಮಿತಿ ಸಭೆಯಲ್ಲಿ ಎರಡೂ ಜಲಾಶಯಗಳಿಂದ ನದಿಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು. ಈಗ ಅಷ್ಟೇ ಪ್ರಮಾಣದ ನೀರು ಹರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಕಾವೇರಿ ಕಣಿವೆ ವ್ಯಾಪ್ತಿಯ ಜಲಾಶಯಗಳ ನೀರಿನ ಒಳ ಹರಿವು ತೀರಾ ಕಡಿಮೆ ಇರುವ ಬಗ್ಗೆಯೂ ಸಭೆಯಲ್ಲಿ ಆತಂಕ ವ್ಯಕ್ತವಾಗಿದೆ.

Post Comments (+)