ಶನಿವಾರ, ಜುಲೈ 31, 2021
28 °C
ಕನ್ನಡ ಕಲಿಸದ ಸಿಬಿಎಸ್‌ಇ ಶಾಲೆಗಳ ವಿರುದ್ಧ ಕ್ರಮ

ಕೇವಲ 3 ಶಾಲೆಗಳಿಗೆ ನೋಟಿಸ್‌!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ರಾಜ್ಯದಲ್ಲಿ ಕನ್ನಡ ಕಲಿಸದ ‘ಸಿಬಿಎಸ್‌ಇ’ ಪಠ್ಯಕ್ರಮದ 150 ಖಾಸಗಿ ಶಾಲೆಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಈವರೆಗೆ ಕೇವಲ 3 ಶಾಲೆಗಳಿಗೆ ಮಾತ್ರ ನೋಟಿಸ್‌ ಕಳುಹಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ತಿಳಿಸಿದರು.

ಶೈಕ್ಷಣಿಕ, ಔದ್ಯೋಗಿಕ ಹಾಗೂ ಆಡಳಿತಾತ್ಮಕವಾಗಿ ಕನ್ನಡ ಬಳಕೆಯಾಗಬೇಕು. ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಲಿಕೆ ಆಗುತ್ತಿಲ್ಲ ಎಂಬ ಆರೋಪವಿದೆ. ಅಂತಹ ಶಾಲೆಗಳ ಪಟ್ಟಿಯನ್ನು ತಯಾರಿಸಿದ್ದು, ಹಂತ ಹಂತವಾಗಿ ನೋಟಿಸ್‌ ಕಳುಹಿಸಿ ಕಾರಣ ಕೇಳಲಾಗುತ್ತಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಾಲೆಗಳು ಡಿಡಿಪಿಐ ಹಾಗೂ ಬಿಇಒಗಳೊಂದಿಗೆ ಶಾಮೀಲಾಗಿ ಕನ್ನಡ ಕಲಿಸಲಾಗುತ್ತಿದೆ ಎಂದು ಪ್ರಮಾಣ ಪತ್ರ ಪಡೆದಿವೆ. ಭ್ರಷ್ಟಾಚಾರದಲ್ಲಿ ಶಾಲಾ ಆಡಳಿತ ಹಾಗೂ ಸರ್ಕಾರಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಇಂತಹ ಭ್ರಷ್ಟಾಚಾರವನ್ನು ಗುರುತಿಸಿ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಅವರಿಗೆ ಮನವಿ ಮಾಡಲಾಗಿದೆ. ನಂತರ, ಶಾಲೆಗಳ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

‘ನಮಗೆ ಕಾನೂನು ಸಮರ ನಡೆಸಲು ಕಷ್ಟವಾಗುತ್ತಿದೆ. ಶಾಲೆಗಳು ಮೈಗೆ ಎಣ್ಣೆ ಹಚ್ಚಿಕೊಂಡಿವೆ. ನಮ್ಮ ಹಿಡಿತಕ್ಕೇ ಸಿಗುತ್ತಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು