ಬೆಂಗಳೂರು: ‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಮುಸ್ಲಿಮರು ಮನೆಯಲ್ಲಿಯೇ ರಂಜಾನ್ ಆಚರಿಸಬೇಕು. ಯಾವುದೇ ಕಾರಣಕ್ಕೂ ಶುಕ್ರವಾರ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಾರದು’ ಎಂದು ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
‘ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವುದರಿಂದ ಸೋಂಕು ಮತ್ತಷ್ಟು ತೀವ್ರವಾಗಿ ಹರಡುವ ಆತಂಕವಿದೆ. ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಿ, ಹಬ್ಬ ಆಚರಿಸಿ’ ಎಂದು ಸೂಚಿಸಿದ್ದಾರೆ.
‘ಕೇಂದ್ರ ಸರ್ಕಾರದ ವಕ್ಫ್ ಮಂಡಳಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ನೀಡಿರುವ ನಿರ್ದೇಶನದ ಪ್ರಕಾರ ರಂಜಾನ್ ತಿಂಗಳಲ್ಲಿ ಸಾಮೂಹಿಕವಾಗಿ ಸಭೆ ಸೇರುವುದು, ಪ್ರಾರ್ಥನೆ ಸಲ್ಲಿಸುವುದು, ಮಸೀದಿಯಲ್ಲಿ ಇಫ್ತಾರ್ ಸೇರುವುದನ್ನು ನಿಷೇಧಿಸಿದೆ. ರಾಜ್ಯ ವಕ್ಫ್ ಮಂಡಳಿಯೂ ಇದೇ ಆದೇಶವನ್ನು ಹೊರಡಿಸಿದೆ’ ಎಂದು ಅವರು ತಿಳಿಸಿದ್ದಾರೆ.
‘ಮಸೀದಿಯಲ್ಲಿರುವ ಮೌಲ್ವಿಗಳು, ಇಮಾಮ್‌ಗಳು ಮತ್ತು ಸಿಬ್ಬಂದಿ ಮಾತ್ರ ವ್ಯಕ್ತಿಗತ ಅಂತರ ಕಾಯ್ದುಕೊಂಡು ಪ್ರಾರ್ಥನೆ ಮಾಡಬೇಕು’ ಎಂದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.