ಶುಕ್ರವಾರ, ಸೆಪ್ಟೆಂಬರ್ 17, 2021
26 °C
ಕೊರೊನಾ ಹರಡುವಿಕೆ ನಿರ್ಬಂಧಗಳಿಂದ ಗ್ರಾಮೀಣ ಕೂಲಿಕಾರ್ಮಿಕರಿಗೆ ತೊಂದರೆ ಹಿನ್ನೆಲೆ

ನರೇಗಾ ಅಡಿ ತುರ್ತು ಕಾಮಗಾರಿ ಆರಂಭಿಸಲು ಕೇಂದ್ರದ ಸೂಚನೆ: ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬಾಗಲಕೋಟೆ: ಮಹಾತ್ಮ ಗಾಂಧೀಜಿ ಗ್ರಾಮೀಣ  ಉದ್ಯೋಗ ಖಾತರಿ ಯೋಜನೆಯಡಿ ತುರ್ತಾಗಿ ಕಾಮಗಾರಿಗಳನ್ನು ಆರಂಭಿಸಿ ಕೇಳಿದ ಎಲ್ಲರಿಗೂ ಕೆಲಸ ಕೊಡುವಂತೆ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ವಿಧಿಸಿರುವ ನಿರ್ಬಂಧಗಳಿಂದಾಗಿ ಗ್ರಾಮೀಣ ಪ್ರದೇಶದಲ್ಲಿ  ದುಡಿದು ತಿನ್ನುವವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೊರೊನಾ ವೈರಸ್ ಸೋಂಕು ತಡೆಗಟ್ಟುವಿಕೆ ಕಾರ್ಯಕ್ರಮಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಕೋಶದ (ಎಸ್ಡಿಆರ್ಎಫ್) ಖಾತೆಗಳಲ್ಲಿರುವ ಹಣ ಬಳಕೆ ಮಾಡಿಕೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮುಂಜಾಗರೂಕತಾ ಕ್ರಮವಾಗಿ ರಾಜ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ಸಭೆಗಳಿಗೆ ನಿಷೇಧ ಹೇರಲಾಗಿದೆ. ಆದರೂ ನಿರ್ಬಂಧಗಳನ್ನು ಲೆಕ್ಕಿಸದೇ ಕೆಲವು ಕಡೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಯಾವುದೇ ಧರ್ಮದವರಾದರೂ ಸರಿ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ಸಂಬಂಧಿಸಿದವರಿಗೆ ನೋಟಿಸ್ ಕೊಡಿ, ಅದಕ್ಕೆ ಮನ್ನಣೆ ನೀಡದಿದ್ದರೆ ಕಾನೂನು ಕ್ರಮ ಜರುಗಿಸಿ ಎಂದು ಆಯಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು