ಅನಂತಕುಮಾರ ವ್ಯಕ್ತಿಯಲ್ಲ, ಶಕ್ತಿಯಾಗಿದ್ದರು: ಸಚಿವ ಡಿ.ವಿ.ಸದಾನಂದಗೌಡ

7

ಅನಂತಕುಮಾರ ವ್ಯಕ್ತಿಯಲ್ಲ, ಶಕ್ತಿಯಾಗಿದ್ದರು: ಸಚಿವ ಡಿ.ವಿ.ಸದಾನಂದಗೌಡ

Published:
Updated:

ಕಲಬುರ್ಗಿ: ಕೇಂದ್ರ ಸಚಿವ ಅನಂತಕುಮಾರ ನಿಧನ ದೊಡ್ಡ ದುರಂತ. ನನಗೆ ಅತ್ಯಂತ ದುಖಃವಾಗಿದೆ. ಅವರು ವ್ಯಕ್ತಿಯಲ್ಲ, ಓರ್ವ ಶಕ್ತಿಯಾಗಿದ್ದರು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರೋಗ್ಯದ ಕಡೆ ಗಮನ ಕೊಡದೇ ನಿರಂತರವಾಗಿ ಕೆಲಸದಲ್ಲಿ ತೊಡಗುತ್ತಿದ್ದರು. ಅತಿಯಾದ ಕೆಲಸದ ಒತ್ತಡವೇ ಅವರ ನಿಧನಕ್ಕೆ ಕಾರಣ ಎನ್ನಬಹುದು. 30 ವರ್ಷಗಳಿಂದ ಅವರೊಂದಿಗೆ ನಿಕಟ ಒಡನಾಟ ಹೊಂದಿದ್ದೆ’ ಎಂದು ಭಾವುಕರಾಗಿ ನುಡಿದರು.

9 ವರ್ಷ ಸುದೀರ್ಘವಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಮ ಕೆಲಸ ಮಾಡಿದ್ದರು. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದರು.

ಇಲ್ಲಿನ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಹೈದರಾಬಾದ್ ಮೂಲಕ ಬೆಂಗಳೂರಿಗೆ ತೆರಳಿದರು.

ಇವನ್ನೂ ಓದಿ...

ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ್‌ಕುಮಾರ್ ಇನ್ನಿಲ್ಲ

ವಿಶಿಷ್ಟ ಆಲೋಚನೆಗಳ ಸಂಘಟನಾ ಚತುರ

ನಾಳೆ ಮಧ್ಯಾಹ್ನ 1ಕ್ಕೆ ಚಾಮರಾಜಪೇಟೆಯಲ್ಲಿ ಅಂತ್ಯಸಂಸ್ಕಾರ

ಸರ್ಕಾರಿ ಕಚೇರಿ, ಬ್ಯಾಂಕ್‌, ಶಿಕ್ಷಣ ಸಂಸ್ಥೆಗಳಿಗೆ ರಜೆ

*  ಅನಂತಕುಮಾರ್‌ ಕೇಂದ್ರ, ರಾಜ್ಯ ಸರ್ಕಾರಕ್ಕೆ ಕೊಂಡಿಯಂತೆ ಇದ್ದರು: ಯಡಿಯೂರಪ್ಪ

‘ಬಿಜೆಪಿಯ ಬಹುದೊಡ್ಡ ಆಸ್ತಿ’: ಅನಂತಕುಮಾರ್ ಸೇವೆ ನೆನಪಿಸಿಕೊಂಡ ರಾಷ್ಟ್ರ ನಾಯಕರು

* ಒಳ್ಳೆಯವರಿಗೆ ದೇವರು ಅನ್ಯಾಯ ಮಾಡಿಬಿಟ್ಟ; ಸಂಸದ ಪ್ರಹ್ಲಾದ ಜೋಶಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !