ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ: ರಾಜ್ಯಕ್ಕೆ ಮತ್ತೆ ₹ 1,869.85 ಕೋಟಿ ಪರಿಹಾರ ಘೋಷಿಸಿದ ಕೇಂದ್ರ

Last Updated 6 ಜನವರಿ 2020, 13:17 IST
ಅಕ್ಷರ ಗಾತ್ರ

ನವದೆಹಲಿ:ರಾಜ್ಯದಲ್ಲಿ ಕಳೆದ ವರ್ಷ ಉಂಟಾಗಿದ್ದ ಪ್ರವಾಹಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತೆ ₹ 1,869.85 ಕೋಟಿ ಪರಿಹಾರ ಘೋಷಿಸಿದೆ.

2019ರ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌)ಯಿಂದ ಕರ್ನಾಟಕಕ್ಕೆ₹ 1,200 ಕೋಟಿ ಮುಂಗಡ ಪರಿಹಾರ ಮಂಜೂರು ಮಾಡಿತ್ತು.

2019ರ ಜುಲೈ ಮತ್ತು ಆಗಸ್ಟ್‌ನಲ್ಲಿ ಸುರಿದ ಭಾರಿ ಮಳೆ ಹಾಗೂ ಮಹಾರಾಷ್ಟ್ರದ ಅಣೆಕಟ್ಟೆಗಳಿಂದ ನೀರು ಹರಿಸಿದ್ದರಿಂದ ರಾಜ್ಯದಲ್ಲಿ ಪ್ರವಾಹ ಸ್ಥಿತಿ ತಲೆದೋರಿತ್ತು. ಇದರಿಂದಾಗಿ ₹ 38,000 ಕೋಟಿಯಷ್ಟು ಅಂದಾಜು ನಷ್ಟ ಉಂಟಾಗಿದೆ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ಆರ್ಥಿಕ ನೆರವು ನೀಡುತ್ತಿಲ್ಲ, ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕರ್ನಾಟಕವನ್ನು ಕಡೆಗಣಿಸುತ್ತಿದ್ದಾರೆ ಎಂದು ಪ್ರತಿಪಕ್ಷಗಳು ವ್ಯಾಪಕ ಟೀಕೆ ಮಾಡಿದ್ದವು.

ಇತ್ತೀಚೆಗೆ ತುಮಕೂರಿಗೆ ಹಾಗೂ ಬೆಂಗಳೂರಿಗೆ ಭೇಟಿ ನೀಡಿದ್ದ ಮೋದಿಅವರನ್ನು ಭೇಟಿ ಮಾಡಿದ್ದಯಡಿಯೂರಪ್ಪ ಪರಿಹಾರ ವಿಚಾರವಾಗಿ ಚರ್ಚೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT