ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ನಷ್ಟದ ಅಂದಾಜು ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ: ಯಡಿಯೂರಪ್ಪ ಸಮರ್ಥನೆ

Last Updated 4 ಅಕ್ಟೋಬರ್ 2019, 4:31 IST
ಅಕ್ಷರ ಗಾತ್ರ

ಬೆಳಗಾವಿ:'ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಸಲ್ಲಿಸಿರುವ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ' ಎಂದು ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ತಿಳಿಸಿದರು.

'ರಾಜ್ಯದ ಪ್ರಸ್ತಾವ ಹಾಗೂ ಕೇಂದ್ರ ತಂಡದ ವರದಿ ಹೊಂದಾಣಿಕೆ ಆಗುತ್ತಿಲ್ಲ. ಈ‌ ಕಾರಣಕ್ಕೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ' ಎಂದು ಸಮರ್ಥಿಸಿಕೊಂಡರು.

'ಸ್ಪಷ್ಟನೆ ಹಾಗೂ ಮಾಹಿತಿ ನೀಡಲೆಂದೇನಮ್ಮ ಇಬ್ಬರು ಅಧಿಕಾರಿಗಳನ್ನು ದೆಹಲಿಗೆ ಕಳಿಸಲಾಗಿದೆ. ಕೇಂದ್ರ ಸರ್ಕಾರ ರಾಜ್ಯದ ವರದಿಯನ್ನು ತಿರಸ್ಕರಿಸಿದೆ ಎಂಬುದು ಸುಳ್ಳು. ಕೇಂದ್ರದ ಎಲ್ಲ ಸಚಿವರೊಂದಿಗೂ ಮಾತನಾಡಿದ್ದೇನೆ. ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ಪರಿಹಾರ ಹಣ ಬಿಡುಗಡೆ ಆಗಲಿದೆ'ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ದೇಶದ ಯಾವ ಪ್ರವಾಹಪೀಡಿತ ರಾಜ್ಯಗಳಿಗೂ ಕೇಂದ್ರದಿಂದ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ‌ ಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಆಗುವ ವಿಶ್ವಾಸ ಇದೆ' ಎಂದರು.

'ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ. ಖಾಲಿ ಆಗಿದ್ದರೆ ಪ್ರವಾಹ ಪರಿಹಾರಕ್ಕೆ ‌ಇಷ್ಟೊಂದು ಹಣ ನೀಡಲು ಆಗುತ್ತಿರಲಿಲ್ಲ. ಮುಂದಿನ ಬಜೆಟ್ ನಲ್ಲಿ ಸಂತ್ರಸ್ತರ ಪುನರ್ವಸತಿಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT