ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲ್ಲೂಕು ಆಸ್ಪತ್ರೆ ಗಳಲ್ಲಿ ಹೈ ಫ್ಲೋ ಆಕ್ಸಿಜನ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದ್ದು,ಈ ಪ್ರಕ್ರಿಯೆಯು ಆಗಸ್ಟ್ 15 ರೊಳಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡಕ್ಕೆರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಆರ್ತಿ ಅಹುಜಾ ಹಾಗೂ ತುರ್ತು ವೈದ್ಯಕೀಯ ಸ್ಪಂದನಾ ಕೇಂದ್ರದ ನಿರ್ದೇಶಕ ಡಾ.ರವೀಂದ್ರನ್ ಅವರು ರಾಜ್ಯಕ್ಕೆ ನೀಡಿದ್ದ ಎರಡು ದಿನಗಳ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಚರ್ಚೆ ನಡೆಸಿದರು.

‘ಇಲ್ಲಿಯವರೆಗೆ ರಾಜ್ಯ ಸರ್ಕಾರ ಉತ್ತಮ ರೀತಿಯಲ್ಲೇ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸಿದೆ. ಆದರೆ, ಮುಂದಿನ ದಿನಗಳು ಅತ್ಯಂತ ಮಹತ್ವದ್ದಾಗಿವೆ. ಕೋವಿಡ್‌ನಿಂದ ಉಂಟಾಗುವ ಮರಣವನ್ನು ತಡೆಗಟ್ಟಲು ಮತ್ತು ರೋಗ ಲಕ್ಷಣ ಇರುವ ಸೋಂಕಿತರಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಒದಗಿಸಲು ಆದ್ಯತೆ ನೀಡಬೇಕಾಗಿದೆ’ ಎಂದು ಕೇಂದ್ರ ತಂಡ ಸೂಚಿಸಿದೆ.

‘ಕಂಟೈನ್‌ಮೆಂಟ್ ವಲಯಗಳಲ್ಲಿ ಮಾರ್ಗಸೂಚಿಗಳು ಕಟ್ಟುನಿಟ್ಟಾಗಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿಯಮಗಳನ್ನು ಸಡಿಲಿಸಬಾರದು’ ಎಂದೂ ಕೇಂದ್ರ ತಂಡ ಹೇಳಿದೆ.

ಕೋವಿಡ್ ನಿಯಂತ್ರಣ ಕ್ಕಾಗಿ ಸಂಪರ್ಕಿತರ ಪತ್ತೆ ಹಚ್ಚುವುದು ಹಾಗೂ ಕೊ–ಮಾರ್ಬಿಡ್ ವ್ಯಕ್ತಿಗಳನ್ನು ಗುರುತಿಸಿ, ಮಾಹಿತಿ ಸಂಗ್ರಹಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಈವರೆಗೂ ಸಮುದಾಯಕ್ಕೆ ಸೋಂಕು ಹರಡಿಲ್ಲ. ಇನ್ನೂ ಮೊದಲ ಮತ್ತು ಎರಡನೇ ಹಂತದಲ್ಲೇ ಇದೆ. ಸೋಂಕು ಮೂರನೇ ಹಂತಕ್ಕೆ ತಲುಪಿಲ್ಲ ಎಂದು ರಾಜ್ಯದ ಅಧಿಕಾರಿಗಳು ತಿಳಿಸಿದರು.

ಆದಾಯವಿಲ್ಲದೇ ಸರ್ಕಾರಕ್ಕೆ ಸಂಕಷ್ಟ: ಸಚಿವ ಹೆಬ್ಬಾರ

ಹಾಸನ: ‘ಕೋವಿಡ್-19ನಿಂದಾಗಿ ರಾಜ್ಯವು ಅತಂತ್ರ ಸ್ಥಿತಿಗೆ ತಲುಪಿದೆ. ಆದಾಯವಿಲ್ಲದೇ ಖರ್ಚು ಹೆಚ್ಚಾಗಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲೂ ಎದೆಗುಂದದೆ ಕೆಲಸ ಮಾಡುತ್ತಿದ್ದೇವೆ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಮಂಗಳವಾರ ಇಲ್ಲಿ ಹೇಳಿದರು.

‘ಇಂತಹದೊಂದು ಕಾಯಿಲೆ ಬರುತ್ತದೆ ಎಂಬ ಊಹೆ ಸಹ ಇರಲಿಲ್ಲ. ಇಷ್ಟಾಗಿಯೂ ಸರ್ಕಾರ ಎಲ್ಲವನ್ನೂ ವ್ಯವಸ್ಥಿತವಾಗಿ ನಿಭಾಯಿಸುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.