ಸೋಮವಾರ, ಆಗಸ್ಟ್ 2, 2021
23 °C

27ಕ್ಕೆ ದಂತ ವೈದ್ಯಕೀಯ ಮಾಪ್‌ ಅಪ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರವೂ ಉಳಿದಿರುವ ದಂತ ವೈದ್ಯಕೀಯ ಪದವಿ ಸೀಟುಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ 27 ಮತ್ತು ಸೆ. 6ಕ್ಕೆ ಮರುಹಂಚಿಕೆ (ಮಾಪ್‌ಅಪ್‌) ಸುತ್ತಿನ ಕೌನ್ಸೆಲಿಂಗ್‌ ನಡೆಸಲಿದೆ.

27ರಂದು ನಡೆಯುವ ಸುತ್ತಿನಲ್ಲಿ ಸೀಟು ಪಡೆದ ಅಭ್ಯರ್ಥಿಗಳು ಇದೇ 31ರ ಸಂಜೆ 4ಗಂಟೆಯೊಳಗೆ ಸಂಬಂಧಪಟ್ಟ ಕಾಲೇಜಿಗೆ ದಾಖಲಾಗಬೇಕು. ಸೆಪ್ಟೆಂಬರ್‌ 6ರಂದು ನಡೆಯುವ ಕೌನ್ಸೆಲಿಂಗ್‌ನಲ್ಲಿ ಸೀಟು ಪಡೆಯುವವರು ಸೆ.10ರ ಸಂಜೆ 4ಗಂಟೆಯೊಳಗೆ ಕಾಲೇಜಿಗೆ ದಾಖಲಾಗಬೇಕು ಎಂದು ಪ್ರಾಧಿಕಾರ ತಿಳಿಸಿದೆ.

ಮೊದಲು ಮತ್ತು ಎರಡನೇ ಸುತ್ತಿನಲ್ಲಿ ಸೀಟು ಪಡೆದವರು ಈ ಮರುಹಂಚಿಕೆ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.  ಮೊದಲ ಸತ್ತಿನಲ್ಲಿ ಆಯ್ಕೆಗೆ ಅವಕಾಶ ನೀಡಿ, ಎರಡನೇ ಸುತ್ತಿನಲ್ಲಿ ಆಯ್ಕೆ ನೀಡದಿರುವವರು ಇದರಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಸೀಟುಗಳ ಮರುಹಂಚಿಕೆ ಸುತ್ತಿಗೆ ನೋಂದಣಿ ಮಾಡಿಕೊಂಡು ದಾಖಲಾತಿ ಪರಿಶೀಲನೆ ಮುಗಿಸಿಕೊಂಡವರು ಮಾತ್ರ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಾಧಿಕಾರ ಸೂಚನೆಯಲ್ಲಿ ತಿಳಿಸಿದೆ.

ಪ್ರಾಧಿಕಾರದ ವೆಬ್‌ಸೈಟ್‌ನಿಂದ ಪ್ರವೇಶ ಪತ್ರವನ್ನು (ಎಂಟ್ರಿ ಪಾಸ್‌) ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಪತ್ರದಲ್ಲಿ ಅಭ್ಯರ್ಥಿಗಳ ಫೋಟೊವನ್ನು ಮುದ್ರಿಸಲಾಗಿರುತ್ತದೆ. ಅಭ್ಯರ್ಥಿಗಳ ಜೊತೆ ಭಾಗವಹಿಸುವವರ ಫೋಟೊವನ್ನೂ ಅಪ್‌ಲೋಡ್‌ ಮಾಡಿ ನಂತರ ಪ್ರಿಂಟ್ ಮಾಡಿಕೊಳ್ಳಬೇಕಿದೆ.

ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಅಥವಾ https://cetonline.karnataka.gov.in ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು