ಸೋಮವಾರ, ಆಗಸ್ಟ್ 2, 2021
23 °C

ಸಿಇಟಿ: ನಾಳೆಯಿಂದ ದಾಖಲೆ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2019-20ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಾಖಲೆಗಳ ಪರಿಶೀಲನೆ ಕಾರ್ಯ ಗುರುವಾರದಿಂದ ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿ ಸಹಿತ ರಾಜ್ಯದ ಎಲ್ಲ ಜಿಲ್ಲೆಗಳ ಸಹಾಯ ಕೇಂದ್ರಗಳಲ್ಲಿ ಆರಂಭವಾಗಲಿದೆ.

ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಕೇಂದ್ರಗಳಿಗೆ ಹಾಜರಾಗಬೇಕು. ಸಾಮಾನ್ಯ ವರ್ಗ, ಮೀಸಲಾತಿ ಪ್ರವರ್ಗಗಳು ಹಾಗೂ ವಿಶೇಷ ಪ್ರವರ್ಗದ ವಿದ್ಯಾರ್ಥಿಗಳು ದಾಖಲಾತಿ ಪರಿಶೀಲನೆಗೆ ತಮ್ಮ ಸ್ವಂತ ಜಿಲ್ಲೆಯಲ್ಲಿ ಅಥವಾ ತಾವು ದ್ವಿತೀಯ ಪಿಯು ವ್ಯಾಸಂಗ ಮಾಡಿದ ಜಿಲ್ಲೆಯ ಸಹಾಯ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕೆಇಎ ಪ್ರಕಟಣೆ ತಿಳಿಸಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು