‘ಸಿಇಟಿ ಆನ್‌ಲೈನ್‌ ಪರೀಕ್ಷೆ ಈ ವರ್ಷ ಇಲ್ಲ’

7

‘ಸಿಇಟಿ ಆನ್‌ಲೈನ್‌ ಪರೀಕ್ಷೆ ಈ ವರ್ಷ ಇಲ್ಲ’

Published:
Updated:

ಬೆಂಗಳೂರು: ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಈ ವರ್ಷವೇ ಆನ್‌ಲೈನ್‌ ಮೂಲಕ ನಡೆಸಲು ಸಾಧ್ಯವಾಗುವುದಿಲ್ಲವೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಮೂಲಗಳು ತಿಳಿಸಿವೆ.

‘ಈ ವರ್ಷದಿಂದಲೇ ಆನ್‌ಲೈನ್‌ ಮೂಲಕ ಸಿಇಟಿ ಪರೀಕ್ಷೆ ನಡೆಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಬುಧವಾರ ಪ್ರಕಟಿಸಿದ್ದರು. ಆದರೆ, ಗುರುವಾರ ಸಮಜಾಯಿಷಿ ನೀಡಿದ ಅವರು, ‘ಈ ವರ್ಷವೇ ಆರಂಭಿಸುತ್ತೇವೆ ಎಂದು ನಾನು ಹೇಳಿಲ್ಲ’ ಎಂದಿದ್ದಾರೆ.

‘ಆನ್‌ಲೈನ್‌ ಮೂಲಕ ಪರೀಕ್ಷೆ ನಡೆಸಲು ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಂದಿಲ್ಲ. ಈಗಾಗಲೇ ಜನವರಿ ತಿಂಗಳು ಆರಂಭವಾಗಿದೆ. ಇನ್ನು ಎರಡು–ಮೂರು ತಿಂಗಳಲ್ಲಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವುದು ಕಷ್ಟ. 2020ರಿಂದ ಆರಂಭಿಸಬಹುದು. ತರಾತುರಿಯಲ್ಲಿ ಆನ್‌ಲೈನ್‌ ಮೂಲಕ ಪರೀಕ್ಷೆ ನಡೆಸಲು ಹೋಗಿ ಸಮಸ್ಯೆ ಉದ್ಭವಿಸಿದರೆ, ಜನರ ಆಕ್ರೋಶಕ್ಕೆ ತುತ್ತಾಗಬೇಕಾಗುತ್ತದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

 ‘ಸಿಇಟಿಯೂ ಸೇರಿದಂತೆ ಕೆಇಎ ನಡೆಸುವ ಎಲ್ಲ ಪರೀಕ್ಷೆಗಳನ್ನು ಆನ್‌ಲೈನ್‌ ಮೂಲಕ ನಡೆಸಲಾಗುವುದು ಎಂದಷ್ಟೇ ಹೇಳಿದೆ. ಕೆಲವು ಮಾಧ್ಯಮಗಳು ತಪ್ಪಾಗಿ ವ್ಯಾಖ್ಯಾನಿಸಿವೆ’ ಎಂದರು.

Tags: 

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !