ಬುಧವಾರ, ಜುಲೈ 28, 2021
28 °C

ಸಿಇಟಿ: ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2019 ರ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಏಪ್ರಿಲ್‌ನಲ್ಲಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಶುಕ್ರವಾರದಿಂದ ನೋಂದಣಿ ಆರಂಭವಾಗಿದೆ.

ಪರೀಕ್ಷೆಗೆ ಹಾಜರಾಗ ಬಯಸುವ ವಿದ್ಯಾರ್ಥಿಗಳು ಇದೇ 28 ರೊಳಗೆ ನೋಂದಣಿ ಮಾಡಬೇಕು. ಶುಲ್ಕ ಪಾವ ತಿಗೆ ಮಾರ್ಚ್‌ 6 ಕಡೇ ದಿನವಾಗಿದ್ದು, ನಿಗದಿತ ಬ್ಯಾಂಕ್‌ ಅಥವಾ ಇ–ಅಂಚೆಯ ಮೂಲಕ ಪಾವತಿ ಮಾಡಬೇಕು.

ಈ ವರ್ಷದಿಂದ ನೋಂದಣಿ ಶುಲ್ಕ ಇಳಿಸಲಾಗಿದೆ. ವಿದ್ಯಾರ್ಥಿಗಳ ಶುಲ್ಕ ₹ 650 ರಿಂದ ₹500 ಕ್ಕೆ ಇಳಿಸಲಾಗಿದೆ. ಪರಿಶಿಷ್ಟಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ₹250 ನಿಗದಿ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಆರ್‌.ಗಿರೀಶ್‌ ತಿಳಿಸಿದರು.

ರಾಜ್ಯದಲ್ಲಿರುವ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ವೃತ್ತಿ ಶಿಕ್ಷಣ ಸಂಸ್ಥೆಗಳಲ್ಲಿರುವ ಎಂಜಿನಿ ಯರಿಂಗ್‌, ತಂತ್ರಜ್ಞಾನ, ಬಿ–ಫಾರ್ಮಾ ಮತ್ತು ಡಿ. ಫಾರ್ಮಾ, ಕೃಷಿ ವಿಜ್ಞಾನ ಕೋರ್ಸ್‌ಗಳು, ಫಾರ್ಮಾ ಸೈನ್ಸ್‌ ಹಾಗೂ ಪಶುವೈದ್ಯಕೀಯ ಕೋರ್ಸ್‌ಗಳಲ್ಲಿ ಲಭ್ಯ ವಿರುವ ಸೀಟುಗಳಿಗೆ ಸೀಟ್‌ ಮ್ಯಾಟ್ರಿಕ್ಸ್‌ ಆಧಾರದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಾಗುವುದು.

ಆನ್‌ಲೈನ್‌ ಮೂಲಕ ಅರ್ಜಿಯನ್ನು ಪ್ರತಿ ದಿನ ಬೆಳಿಗ್ಗೆ 11 ರಿಂದ ಸಂಜೆ 5.30 ರೊಳಗೆ ಭರ್ತಿ ಮಾಡಬಹುದು.  ಮಾರ್ಚ್‌ 19 ರಿಂದ 25 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5.30 ರ ಅವಧಿಯಲ್ಲಿ ಅರ್ಜಿಯಲ್ಲಿ ಅಗತ್ಯ ಮಾಹಿತಿಗಳನ್ನು ತಿದ್ದುಪಡಿ ಮಾಡಬಹುದು. ಶುಲ್ಕ ಪಾವತಿ ಮಾಡಿದವರಿಗೆ ಮಾತ್ರ ಇದಕ್ಕೆ ಅವಕಾಶ ನೀಡಲಾಗುವುದು.

ಮೊದಲ ದಿನವೇ ಸುಮಾರು 150 ರಿಂದ 200 ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು