ಬುಧವಾರ, ಆಗಸ್ಟ್ 4, 2021
29 °C

ದಾಖಲಾತಿ ಪರಿಶೀಲನೆ ಇಂದು ಕೊನೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2019ನೇ ಸಾಲಿನ ಯುಜಿ ನೀಟ್‌ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್‌ ‌ಕೋರ್ಸ್‌ಗಳ ನೋಂದಣಿಗಾಗಿ ಶುಕ್ರವಾರದವರೆಗೆ ‌ಆನ್‌ಲೈನ್‌ನಲ್ಲಿ ಅರ್ಜಿ ನೋಂದಣಿ ಮಾಡಿಕೊಂಡಿರುವ ಅಥವಾ ಈ ಮೊದಲೇ ನೋಂದಣಿ ಮಾಡಿ ದಾಖಲಾತಿ ಪರಿಶೀಲನೆ ಮಾಡದೆ ಇರುವವರು ಶನಿವಾರ ಮಧ್ಯಾಹ್ನ 2ರವರೆಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳಬಹುದು.

ಎಲ್ಲ ಮೂಲ ದಾಖಲೆ ಪತ್ರಗಳೊಂದಿಗೆ ಪರಿಶೀಲನೆಗೆ ಹಾಜರಾಗಬೇಕು. ಈಗಾಗಲೇ ದಾಖಲಾತಿ ಪರಿಶೀಲನೆ ನಡೆಸಿದವರು ಹಾಜರಾಗುವಂತಿಲ್ಲ.

ಮಾಹಿತಿಗೆ kea.kar.nic.in ವೀಕ್ಷಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಆರ್‌. ಗಿರೀಶ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು