ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಫೋನಿ’ ಪೀಡಿತರಿಗೆ ಸಿಎಫ್‌ಟಿಆರ್‌ಐ ಆಹಾರ

1 ಲಕ್ಷ ಪೊಟ್ಟಣಗಳನ್ನು ರವಾನೆ ಮಾಡಲು ಸಿದ್ಧತೆ ಆರಂಭ
Last Updated 3 ಮೇ 2019, 13:05 IST
ಅಕ್ಷರ ಗಾತ್ರ

ಮೈಸೂರು: ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ವತಿಯಿಂದ ‘ಫೋನಿ’ ಚಂಡಮಾರುತ ಪೀಡಿತರಿಗೆ 1 ಲಕ್ಷ ಆಹಾರದ ಪೊಟ್ಟಣಗಳನ್ನು ರವಾನೆ ಮಾಡಲು ಸಿದ್ಧತೆ ಆರಂಭವಾಗಿದೆ.

ಒಡಿಶಾ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳಕ್ಕೆ ಈ ಆಹಾರ ಪೊಟ್ಟಣಗಳು ಮೇ 6ರಂದು ರವಾನೆ ಆಗಲಿವೆ. ಇದಕ್ಕಾಗಿ ಸಂಸ್ಥೆಯ ಆವರಣದಲ್ಲಿ ಈಗಾಗಲೇ ಆಹಾರ ಕಚ್ಚಾ ಸಾಮಗ್ರಿಗಳನ್ನು ಒಟ್ಟು ಮಾಡಿಕೊಂಡಿದ್ದು ಸಂಸ್ಥೆಯ ನೂರಾರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಮರೋಪಾದಿಯಲ್ಲಿ ಸಿದ್ಧತೆ ನಡೆಸಿದ್ದಾರೆ.

‘ಬಹುಕಾಲ ಬಾಳಿಕೆ ಬರುವಂತಹ ಆಹಾರ ಪೊಟ್ಟಣಗಳನ್ನು ತಯಾರು ಮಾಡಲಾಗುತ್ತಿದೆ. ಸಂಸ್ಥೆ ಬಳಿ ಹಾಲಿ ಲಭ್ಯವಿರುವ ತಂತ್ರಜ್ಞಾನವನ್ನು ಬಳಸಿಕೊಂಡು ಬೇಗನೇ ಕೆಡದಂತಹ ಆಹಾರವನ್ನು ಸಿದ್ಧಪಡಿಸಲಾಗುತ್ತಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್‌.ಎಂ.ಎಸ್.ರಾಘವ ರಾವ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಕೇರಳ ಹಾಗೂ ಕೊಡಗಿನಲ್ಲಿ ಪ್ರವಾಹ ಉಂಟಾಗಿದ್ದಾಗ ಸಂಸ್ಥೆಯು 50 ಸಾವಿರ ಆಹಾರ ಪೊಟ್ಟಣಗಳನ್ನು ‍‍ಪೂರೈಕೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT