ಮಂಗಳವಾರ, ಮಾರ್ಚ್ 2, 2021
31 °C
ಡಿ.ಕೆ. ರವಿ ಅವರ ಜೀವನಾಧಾರಿತ ಚಿತ್ರ

‘ಚಂಬಲ್‌’ ಚಿತ್ರಕ್ಕೆ ತಡೆ ಕೋರಿದ್ದ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಐಎಎಸ್ ಅಧಿಕಾರಿಯಾಗಿದ್ದ ದಿವಂಗತ ಡಿ.ಕೆ. ರವಿ ಅವರ ಜೀವನಾಧಾರಿತ ಚಿತ್ರ ಎಂದು ಆರೋಪಿಸಲಾದ ‘ಚಂಬಲ್’ ಚಲನಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಚಿತ್ರ ಬಿಡುಗಡೆಗೆ ತಡೆ ಕೋರಿ ಡಿ.ಕೆ. ರವಿ ಅವರ ತಾಯಿ ಗೌರಮ್ಮ, ತಂದೆ ಕರಿಯಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ವಿಚಾರಣೆ ವೇಳೆ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್ ಅವರು, ‘ಚಿತ್ರ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಜೀವನಾಧಾರಿತವಲ್ಲ. ಚಿತ್ರದಲ್ಲಿ ಯಾವುದೇ ವ್ಯಕ್ತಿಯ ಚಾರಿತ್ರ್ಯ ಹರಣವಾಗಿಲ್ಲ. ಚಿತ್ರ ಬಿಡುಗಡೆಯಾಗಿ ಐದು ತಿಂಗಳೇ ಕಳೆದಿವೆ. ಆದರೂ, ಚಿತ್ರದಲ್ಲಿ ಆಕ್ಷೇಪಾರ್ಹ ಅಂಶಗಳಿವೆ ಎಂದು ಅರ್ಜಿದಾರರು ಈ ತನಕ ತಕರಾರು ತೆಗೆದಿಲ್ಲ. ಸಿವಿಲ್ ದಾವೆ ಅಥವಾ ಮಾನನಷ್ಟ ಮೊಕದ್ದಮೆ ದಾಖಲು ಮಾಡಿಲ್ಲ. ಹೀಗಾಗಿ ಈ ಅರ್ಜಿ ನಿಷ್ಫಲದಾಯಕ ಎಂದು ಪರಿಗಣಿಸಿ ವಜಾಗೊಳಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು