ಶನಿವಾರ, ಅಕ್ಟೋಬರ್ 19, 2019
28 °C
ಅಯೋಧ್ಯೆ ವಿವಾದ ಮುಚ್ಚಿಹಾಕಲು ಕಾಂಗ್ರೆಸ್‌ ಷಡ್ಯಂತ -ಮುತಾಲಿಕ್

ಚಂದನ್ ಶೆಟ್ಟಿ ಪ್ರೇಮ ನಿವೇದನೆ ತಪ್ಪಲ್ಲ, ನಿಯಮ ಇದ್ದರೆ ಸೋಮಣ್ಣ ಹೇಳಲಿ- ಮುತಾಲಿಕ್

Published:
Updated:
Prajavani

ಉಡುಪಿ: ಯುವ ದಸರಾ ವೇದಿಕೆಯಲ್ಲಿ ಚಂದ್ರನ್‌ ಮತ್ತು ನಿವೇದಿತಾ ಪ್ರೇಮ ನಿವೇದನೆ ಮಾಡಿರುವ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ವೇದಿಕೆಯಲ್ಲಿ ಪ್ರೇಮ ನಿವೇದನೆ ಮಾಡಬಾರದೆಂಬ ನಿಯಮ ಎಲ್ಲಿದೆ?. ಅನಾವಶ್ಯಕವಾಗಿ ಈ ಪ್ರಕರಣವನ್ನು ಎಳೆಯುತ್ತಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಿರುವುದು ತಪ್ಪು. ಅವರು ಸಂದರ್ಭಕ್ಕೆ ಅನುಗುಣವಾಗಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾರೆ. ಅದನ್ನು ಬಹಳ ದೊಡ್ಡ ಅಪರಾಧ ಎಂಬ ರೀತಿಯಲ್ಲಿ ಬಿಂಬಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸರ್ಕಾರಿ ವೇದಿಕೆ ಮೇಲೆ ಪ್ರೇಮ ನಿವೇದನೆ! ಕ್ಷಮೆಯಾಚಿಸಿದ ಚಂದನ್‌ ಶೆಟ್ಟಿ

ವೇದಿಕೆಯಲ್ಲಿ ಪ್ರೇಮ ನಿವೇದನೆ ಮಾಡಬಾರದೆಂದು ನಿಯಮ ಇದ್ದರೆ ಸಚಿವ ಸೋಮಣ್ಣ ಹೇಳಲಿ. ಈ ಪ್ರಕರಣವನ್ನು ಇಲ್ಲಿಗೆ ಬಿಟ್ಟರೆ ಯಾವುದೇ ಸಮಸ್ಯೆ ಆಗಲ್ಲ. ಇಬ್ಬರ ಮೇಲೂ ಚಾಮುಂಡೇಶ್ವರಿ ಆಶೀರ್ವಾದ ಇದೆ. ಅವರ ದಾಂಪತ್ಯ ಜೀವನ ಸುಖಕರವಾಗಿ ಆಗುತ್ತದೆ ಎಂದು ಮುತಾಲಿಕ್‌ ಹೇಳಿದರು.

ಅಯೋಧ್ಯೆ ವಿಷಯದಲ್ಲಿ ಕಾಂಗ್ರೆಸ್ ಷಡ್ಯಂತ್ರ

ಕಳೆದ 70 ವರ್ಷಗಳಿಂದ ಕಾಂಗ್ರೆಸ್‌ ವ್ಯವಸ್ಥಿತವಾಗಿ ಅಯೋಧ್ಯೆ ವಿವಾದವನ್ನು ಮುಚ್ಚಿಹಾಕಿತ್ತು. ಮುಸ್ಲಿಮರನ್ನು ಹಿಂದುಗಳ ಮೇಲೆ ಎತ್ತಿಕಟ್ಟುವ ಷಡ್ಯಂತ್ರ ಮಾಡಿತ್ತು. ಆದರೆ ಈಗ ಸುಪ್ರೀಂ ಕೋರ್ಟ್‌ನಲ್ಲಿ ಸರಿಯಾದ ದಿಕ್ಕಿನಲ್ಲಿ ವಿಚಾರಣೆ ನಡೆಯುತ್ತಿದ್ದು, ರಾಮಜನ್ಮ ಭೂಮಿ ಮತ್ತೆ ನಮಗೆ ಸಿಗುವ ವಿಶ್ವಾಸ ಇದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹೇಳಿದರು.

ಉಡುಪಿ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನಕ್ಕೆ ಅವರು ಭಾನುವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತದೆ. ಇದಕ್ಕೆ ಪೂರಕವಾಗಿ ಕೋರ್ಟ್‌ ತೀರ್ಪು ಬರಲಿದ್ದು, ಈ ಬಗ್ಗೆ ನೂರಕ್ಕೆ ನೂರರಷ್ಟು ನಮಗೆ ನಂಬಿಕೆ ಇದೆ ಎಂದರು.

ಅ.13ರಿಂದ ದತ್ತಮಾಲಾ

ಅ. 13ರಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು, ಸುಮಾರು ಸಾವಿರ ಮಾಲಾಧಾರಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದರಲ್ಲಿ ಜಮ್ಮುಕಾಶ್ಮೀರದ ರಾಹುಲ್‌ ಕೌಲ್‌ ಭಾಗವಹಿಸುತ್ತಾರೆ ಎಂದು ಹೇಳಿದರು.

ಸೂಲಿಬೆಲೆಯನ್ನು ದೇಶದ್ರೋಹಿ ಅಂದದ್ದು ತಪ್ಪು. ಸಂಸದರ ಗೆಲುವಿನ ಹಿಂದೆ ಸೂಲಿಬೆಲೆ ಪರಿಶ್ರಮ ಇದೆ. ಸೂಲಿಬೆಲೆಗೆ ನೆರೆ ಪರಿಹಾರ ವಿಚಾರದಲ್ಲಿ ನೋವಿದೆ. ಆದರೆ ಅವರಿಗೆ ದೇಶದ್ರೋಹಿ ಪಟ್ಟ ಕಟ್ಟಿದ್ದು ಮೂರ್ಖತನ. ಸಂಘ ಪರಿವಾರ ಇದನ್ನೆಲ್ಲಾ ಗಂಭೀರವಾಗಿ ಪರಿಗಣಿಸಬೇಕು. ನನ್ನನ್ನು ಮೂಲೆಗುಂಪು ಮಾಡುವ ಪ್ರಯತ್ನ ನಡೆದಿತ್ತು. ಅದೇ ರೀತಿ ಸೂಲಿಬೆಲೆಯನ್ನು ಪಕ್ಕಕ್ಕೆ ಸರಿಸೋ ಪ್ರಯತ್ನ ಸರಿಯಲ್ಲ ಎಂದರು.

ನೆರೆ ಪರಿಹಾರ ತರುವಲ್ಲ ಜನಪ್ರತಿನಿಧಿಗಳು ಪೂರ್ಣ ಪ್ರಮಾಣದಲ್ಲಿ ಧುಮುಕಿದ್ದಾರೆ. ಆದರೆ ಕೇಂದ್ರದ ನಿಲುವು ಏನೆಂಬುವುದು ಯಾರಿಗೂ ಗೊತ್ತಾಗುತ್ತಿಲ್ಲ. ಸದ್ಯ ಮಂಜೂರಾಗಿರುವ 1200ಕೋಟಿ ಪರಿಹಾರ ಎಲ್ಲಿಗೂ ಸಾಕಾಗುವುದಿಲ್ಲ ಎಂದು ತಿಳಿಸಿದರು.

Post Comments (+)