ಮಂಗಳವಾರ, ಏಪ್ರಿಲ್ 20, 2021
29 °C

ಚಂದ್ರಯಾನ ಸಿದ್ಧತೆ ಪೂರ್ಣ: ಶಿವನ್‌

ಪಿಟಿಐ Updated:

ಅಕ್ಷರ ಗಾತ್ರ : | |

ತಿರುಪತಿ: ‘ಚಂದ್ರಯಾನ–2’ರ ಸಿದ್ಧತೆಗಳೆಲ್ಲ ಪೂರ್ಣಗೊಂಡಿವೆ, ಸೋಮವಾರ ಬೆಳಗಿನ ಜಾವ 2.51ಕ್ಕೆ ಜಿಎಸ್‌ಎಲ್‌ವಿ ಎಂಕೆ3 ಬಾಹ್ಯಾಕಾಶಕ್ಕೆ ಹಾರಲಿದೆ’ ಎಂದು ಇಸ್ರೊ ಅಧ್ಯಕ್ಷ ಕೆ. ಶಿವನ್‌ ಹೇಳಿದರು.

ಶನಿವಾರ ಇಲ್ಲಿನ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಪ್ರತಿನಿಧಿಗಳ ಜೊತೆ ಮಾತನಾಡಿದರು.

‘ಉಡಾವಣೆಯಾದ ಎರಡು ತಿಂಗಳ ಬಳಿಕ ನೌಕೆಯು ಚಂದ್ರನ ಮೇಲೆ ಇಳಿಯಲಿದೆ. ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆ ಸರಳವಾಗಿರಬೇಕೆಂಬ ಉದ್ದೇಶದಿಂದ ನಾವು ಹೊಸ ತಂತ್ರಜ್ಞಾನವನ್ನು ಬಳಸುತ್ತಿದ್ದೇವೆ. ಈ ಕಾರ್ಯಕ್ರಮದಿಂದ ಅಲ್ಲಿನ ವಾತಾವರಣದ ಬಗ್ಗೆ ನಮಗೆ ಅನೇಕ ಹೊಸ ವಿಚಾರಗಳು ತಿಳಿದುಬರಲಿವೆ’ ಎಂದು ಶಿವನ್‌ ಹೇಳಿದರು.

2008ರಲ್ಲಿ ‘ಚಂದ್ರಯಾನ–1’ ಯೋಜನೆಯನ್ನು ಇಸ್ರೊ ಯಶಸ್ವಿಯಾಗಿ ಕಾರ್ಯಗತಗೊಳಿಸಿತ್ತು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು