ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯದಲ್ಲಿ ಟಿಪ್ಪು ವಿಷಯ ಮುಂದುವರಿಕೆ ಸಾಧ್ಯತೆ

Last Updated 3 ಡಿಸೆಂಬರ್ 2019, 18:16 IST
ಅಕ್ಷರ ಗಾತ್ರ

ಬೆಂಗಳೂರು: ಶಾಲಾ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಕುರಿತ ವಿಷಯವನ್ನು ಮುಂದುವರಿಸುವಂತೆ ತಜ್ಞರನ್ನು ಒಳ
ಗೊಂಡ ‘ವಿಶೇಷ ತಂಡ’ ಶಿಫಾರಸು ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ಹಾಗೂ ಪ್ರೌಢಶಾಲೆ ಪಠ್ಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಎರಡು ವರದಿಯನ್ನು ತಂಡ ಸಿದ್ಧಪಡಿ
ಸಿದ್ದು, ಡಿ. 6ರಂದು ಕರ್ನಾಟಕ ಪಠ್ಯಪುಸ್ತಕ ಸೊಸೈಟಿಗೆ ಸಲ್ಲಿಸಲಿದೆ. ಪ್ರಸ್ತುತಇರುವ ವಿಷಯದಲ್ಲಿ ಯಾವ ವಿಚಾರ
ವನ್ನೂ ಬದಲಾಯಿಸದಂತೆ ಸಲಹೆ ನೀಡಲಿದೆ ಎನ್ನಲಾಗಿದೆ.

ಟಿಪ್ಪು ವಿಷಯವನ್ನು ಶಾಲಾ ಪಠ್ಯದಿಂದ ತೆಗೆದುಹಾಕಬೇಕು ಎಂದು ಕೆಲವರು ಸರ್ಕಾರದ ಮೇಲೆ ಒತ್ತಡ ತಂದಿದ್ದರು.ಪಠ್ಯದಿಂದ ಟಿಪ್ಪು ವಿಷಯ ತೆಗೆದುಹಾಕುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಪ್ರಕಟಿಸಿದ್ದರು. ಪ್ರಾಥಮಿಕ ಹಾಗೂ ಪ್ರೌಢ
ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ಅವರಿಗೆಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಪತ್ರ ಬರೆದು ಟಿಪ್ಪು ವಿಷಯವನ್ನು ತೆಗೆದು
ಹಾಕಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ವಿಚಾರ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT