ಡ್ರೀಮ್ಸ್‌ ಇಂಡಿಯಾ ಕಂಪನಿ ವಿರುದ್ಧದ ಅರ್ಜಿ ವಿಲೇವಾರಿ

7
ಫ್ಲ್ಯಾಟ್‌ ನೀಡಿಕೆ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ

ಡ್ರೀಮ್ಸ್‌ ಇಂಡಿಯಾ ಕಂಪನಿ ವಿರುದ್ಧದ ಅರ್ಜಿ ವಿಲೇವಾರಿ

Published:
Updated:

ಬೆಂಗಳೂರು: ‘ಡ್ರೀಮ್ಸ್‌ ಜಿ.ಕೆ ಇನ್ಫ್ರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಹೆಸರಿನಲ್ಲಿ ಸಾವಿರಾರು ಜನರಿಗೆ ಕೋಟ್ಯಂತರ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

‘ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ನಿರ್ದೇಶಿಸಬೇಕು’ ಎಂದು ‌ಕೋರಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಲೇವಾರಿ ಮಾಡಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲ ಡಿ.ನಾಗರಾಜ್‌ ಜ್ಞಾಪನಾ ಪತ್ರ (ಮೆಮೊ) ಸಲ್ಲಿಸಿ, ‘ಈಗಾಗಲೇ ಸಿಐಡಿ ಸಮಗ್ರ ತನಿಖೆ ನಡೆಸಿದೆ. ಆರೋಪಿಗಳ ಆಸ್ತಿ ಜಪ್ತಿಗೆ ಕಾನೂನು ಕ್ರಮ ಜರುಗಿಸಿದೆ’ ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

ಆರೋಪವೇನು?: ‘ಡೀಮ್ಸ್ ಜಿ.ಕೆ ಇನ್ಫ್ರಾ ಇಂಡಿಯಾ ಪ್ರವೈಟ್ ಲಿಮಿಟೆಡ್ ಹೆಸರಿನಲ್ಲಿ ಸಚಿನ್ ನಾಯಕ್ ಮತ್ತು ದಿಶಾ ಚೌಧರಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಸಾರ್ವಜನಿಕರಿಂದ ಕೋಟ್ಯಂತರ ಮೊತ್ತವನ್ನು ತಮ್ಮ ಕಂಪನಿಗೆ ಹೂಡಿಕೆ ಮಾಡಿಸಿಕೊಂಡು ಮೋಸ ಎಸಗಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !