ಮಂಗಳವಾರ, ಸೆಪ್ಟೆಂಬರ್ 28, 2021
20 °C
ಮೈತ್ರಿ ಮಂಡ್ಯದಲ್ಲಷ್ಟೇ ಅಲ್ಲ; ರಾಜ್ಯದಲ್ಲೂ ಸಾಧ್ಯವಿಲ್ಲ

‘ಕುಮಾರಸ್ವಾಮಿ ವರ್ತನೆ ಬದಲಿಸಿಕೊಳ್ಳಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೊದಲು ತಮ್ಮ ವರ್ತನೆ ಬದಲಿಸಿಕೊಳ್ಳಲಿ. ನಂತರ, ಕಾಂಗ್ರೆಸ್ ನಾಯಕರು ಯಾವ ರೀತಿ ಇರಬೇಕು ಎಂಬ ಕುರಿತು ಉಪದೇಶ ನೀಡಲಿ’ ಎಂದು ಕಾಂಗ್ರೆಸ್‌ ಮುಖಂಡ ಎನ್.ಚಲುವರಾಯಸ್ವಾಮಿ ಹರಿಹಾಯ್ದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ‘ಕೇವಲ 37 ಶಾಸಕರನ್ನು ಹೊಂದಿರುವ ಎಚ್.ಡಿ.ಕುಮಾರಸ್ವಾಮಿ, 80 ಸ್ಥಾನ ಗೆದ್ದಿರುವ ರಾಷ್ಟ್ರೀಯ ಪಕ್ಷದ ನಾಯಕರಿಗೆ ಸೂಚನೆ ನೀಡುತ್ತಾರೆ! ಮೈತ್ರಿ ಸರ್ಕಾರದಲ್ಲಿ ಯಾವತ್ತೂ ಇಂತಹ ನಡವಳಿಕೆ ನೋಡಿಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್, ಮಂಡ್ಯದಲ್ಲಿ ಮಾತ್ರವಲ್ಲ ರಾಜ್ಯದಲ್ಲೂ ಒಂದಾಗಲು ಸಾಧ್ಯವಿಲ್ಲ’ ಎಂದರು.

ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ‘ಈ ಹಿಂದೆ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುವ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಜಾತ್ಯತೀತ ನಾಯಕರಾಗಿ ಹಲವು ಯೋಜನೆಗಳ ಮೂಲಕ ಜನರ ಮನದಲ್ಲಿದ್ದಾರೆ. ಹೀಗಾಗಿ, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು