ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಂತ್ರ ಕಾರ್ಮಿಕರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ ಮುಖ್ಯಮಂತ್ರಿ

Last Updated 3 ಮೇ 2020, 6:03 IST
ಅಕ್ಷರ ಗಾತ್ರ

ಬೆಂಗಳೂರು: ಇಂದಿನಿಂದ 3ದಿನಗಳವರೆಗೆಕಾರ್ಮಿಕರು ತಮ್ಮಊರುಗಳಿಗೆಹೋಗಲು ಉಚಿತ ಪ್ರಯಾಣದ ವ್ಯವಸ್ಥೆ ಮಾಡಬೇಕೆಂದು ಸೂಚನೆ‌ ನೀಡಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಅತಂತ್ರ ಸ್ಥಿತಿಯಲ್ಲಿರುವ ಪ್ರಯಾಣಿಕರು ತಮ್ಮ ಊರುಗಳಿಗೆ ತಲುಪಲು ಅವಕಾಶ ನೀಡಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿತ್ತು. ಈ ಆದೇಶದನ್ವಯರಾಜ್ಯದಲ್ಲಿಯೂ ಹೊರಜಿಲ್ಲೆಗಳಿಗೆ ಪ್ರಯಾಣಿಕರು ತೆರಳಲು ನಿಯಮಿತ ಬಸ್ಸುಗಳಿಗೆ ಅವಕಾಶ ನೀಡಲಾಗಿತ್ತು. ದುಬಾರಿ ಟಿಕೆಟ್ ದರ ನೀಡಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಕಾರ್ಮಿಕರ ಬಳಿ ಹಣ ಇಲ್ಲದೆ, ಕೆಲ ಪ್ರಯಾಣಿಕರು ಮೆಜೆಸ್ಟಿಕ್‌ನಲ್ಲಿಯೇ ಕಾಲ ಕಳೆಯುವಂತಾಗಿತ್ತು.ಇದು ಮಾಧ್ಯಮದಲ್ಲಿಯೂ ಸುದ್ದಿಯಾಗಿತ್ತು.

ಇದನ್ನು ಮನಗಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದ ಕಾರ್ಮಿಕರುಎಲ್ಲಾ ಊರುಗಳಿಗೂ ತೆರಳಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT