ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂತ್ವನ ಕೇಂದ್ರಗಳನ್ನು ಮುಂದುವರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ

Last Updated 29 ಮೇ 2020, 13:18 IST
ಅಕ್ಷರ ಗಾತ್ರ

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ಅಗತ್ಯ ನೆರವು ಒದಗಿಸುತ್ತಿರುವ ಸಾಂತ್ವನ ಯೋಜನೆಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಒನ್ ಸ್ಟಾಪ್ ಕೇಂದ್ರಗಳನ್ನು ಪ್ರಾರಂಭಿಸಿರುವುದರಿಂದ ಸಾಂತ್ವನ ಯೋಜನೆಯನ್ನು ಸ್ಥಗಿತಗೊಳಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಾಂತ್ವನ ಯೋಜನೆ ನೆರವು ನೀಡುತ್ತಿರುವುದರಿಂದ ಈ ಯೋಜನೆಯನ್ನು ಮುಂದುವರಿಸಲು ತೀರ್ಮಾನಿಸಲಾಯಿತು.

ಭಾಗ್ಯಲಕ್ಷ್ಮಿ ಯೋಜನೆಯನ್ನು ಅಂಚೆ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡು ಸುಕನ್ಯಾ ಸಮೃದ್ಧಿ ಯೋಜನೆಯಡಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಕೋವಿಡ್ 19 ಹಿನ್ನೆಲೆಯಲ್ಲಿ ಉಂಟಾದ ಲಾಕ್‍ಡೌನ್ ಸಂದರ್ಭದಲ್ಲಿ ಇಲಾಖೆಯು ಆಹಾರ ಧಾನ್ಯಗಳನ್ನು ಪ್ರತಿ ಫಲಾನುಭವಿಗಳ ಮನೆ ಬಾಗಿಲಿಗೆ ವಿತರಿಸಿದೆ. ಇದೇ ಅವಧಿಯಲ್ಲಿ 278 ಬಾಲ್ಯ ವಿವಾಹಗಳನ್ನು ತಡೆಹಿಡಿಯಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮಾಸ್ಕ್‌ಗಳನ್ನು ಹೊಲಿದು ವಿತರಿಸಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದರು.

ಸಭೆಯಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ನಿರ್ದೇಶಕ ಕೆ.ಎ.ದಯಾನಂದ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT