ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ: ಸಾಧಕ ಬಾಧಕ ಚರ್ಚಿಸಿ ತೀರ್ಮಾನ; ಬಿಎಸ್‌ವೈ

Last Updated 29 ಮೇ 2020, 10:50 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ಜಿಲ್ಲೆಯ ಸಂಸದರು ಹಾಗೂ ಶಾಸಕರು ಶುಕ್ರವಾರ ಇಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮೈಶುಗರ್ ಕಾರ್ಖಾನೆಯ ಬಗ್ಗೆ ಚರ್ಚಿಸಿದರು.

ಐತಿಹಾಸಿಕ ಮಹತ್ವವುಳ್ಳ ಮಂಡ್ಯದ ಮೈ ಶುಗುರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಯಬೇಕು ಹಾಗೂ ಜಿಲ್ಲೆಯ ರೈತರನ್ನು ಕಾಪಾಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.

ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪುಶ್ಚೇತನಗೊಳಿಸಲು ಸರ್ಕಾರ ಬದ್ಧವಾಗಿದ್ದು, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಹಾಗೂ ಸರ್ಕಾರವೇ ಕಾರ್ಖಾನೆಯ ಸಂಪೂರ್ಣ ನಿರ್ವಹಣೆ ಮಾಡುವುದರ ಸಾಧಕ ಬಾಧಕಗಳ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ತೋಟಗಾರಿಕೆ ಸಚಿವ ನಾರಾಯಣಗೌಡ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಶಾಸಕರಾದ ಅನ್ನದಾನಿ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ರೈತ ನಾಯಕಿ ಸುನಂದಾ ಜಯರಾಂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT