ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ನಿವೃತ್ತಿ, ಮರಣ ಅಥವಾ ಇತರ ಕಾರಣಗಳಿಂದ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕೇಂದ್ರ ನೆರವಿನ ಅಮೃತ್ ಯೋಜನೆಯಡಿ ಕೇಂದ್ರದ ಪಾಲಿನ ಬಾಕಿ ಅನುದಾನ ಪಡೆಯಲು ರಾಜ್ಯದ ಪಾಲಿನ ಭಾಗವಾಗಿ ₹ 209 ಕೋಟಿ ಬಿಡುಗಡೆ ಮಾಡುವಂತೆಯೂ ಅಧಿಕಾರಿಗಳಿಗೆ ತಿಳಿಸಿದರು.

ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಬಳಿ ₹47.24 ಕೋಟಿ ಲಭ್ಯವಿದೆ. ಏಪ್ರಿಲ್ ಅಂತ್ಯದ ವರೆಗೆ 12 ನಗರಗಳಲ್ಲಿ ಖಾಸಗಿ ಟ್ಯಾಂಕರುಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿದೆ. ಮುಂದಿನ ಎರಡು ತಿಂಗಳಲ್ಲಿ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜನರು ಕುಡಿಯುವ ನೀರಿಗಾಗಿ ಪರದಾಡಬಾರದು ಎಂದು ಯಡಿಯೂರಪ್ಪ ಹೇಳಿದರು.

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನಕ್ಕೆ ಯಾವುದೇ ತೊಡಕಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದರು.

ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಬಗ್ಗೆ ಮುಖ್ಯಮಂತ್ರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಪೌರಾಡಳಿತ ಸಚಿವ ನಾರಾಯಣಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.