ಶುಕ್ರವಾರ, ಡಿಸೆಂಬರ್ 6, 2019
20 °C

ಚಿಕ್ಕಬಳ್ಳಾಪುರ: ದಾಖಲೆ ಇಲ್ಲದ ₹40 ಲಕ್ಷ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಗೌರಿಬಿದನೂರು ಹತ್ತಿರದ ಬೀರಮಂಗಲದ ಚೆಕ್‌ಪೋಸ್ಟ್‌ನಲ್ಲಿ ಭಾನುವಾರ ಸಂಜೆ ಮಾದರಿ ನೀತಿ ಸಂಹಿತೆ ತಂಡದ ಅಧಿಕಾರಿಗಳು ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹40 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.

ಮಾರುತಿ ಶಿಫ್ಟ್ ಡಿಸೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣ ಲೋಟಸ್ ಕಂಪನಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ವಶಪಡಿಸಿಕೊಂಡಿರುವ ಹಣವನ್ನು ಚುನಾವಣಾ ನಗದು ಮುಟ್ಟುಗೋಲು ಪರಿಹಾರ ಸಮಿತಿಯು ಜಿಲ್ಲಾ ಖಜಾನೆಗೆ ಒಪ್ಪಿಸಿದೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿಚಾರಣೆ ಬಳಿಕವಷ್ಟೇ ಹಣದ ನಿಖರ ಮೂಲ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು