ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೃಂಗೇರಿ, ಕೆಮ್ಮಣ್ಣುಗುಂಡಿ, ಮುಳ್ಳಯ್ಯನಗಿರಿಗೆ ತಿಂಗಳ ಕಾಲ ಬರಬೇಡಿ: ಡಿಸಿ ಮನವಿ

Last Updated 16 ಮಾರ್ಚ್ 2020, 15:53 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕೊರೊನಾ ವೈರಸ್‌ ಎಲ್ಲೆಡೆ ತಲ್ಲಣ ಸೃಷ್ಟಿಸಿದ್ದು ಹೊರ ದೇಶ, ಹೊರ ರಾಜ್ಯ, ಹೊರ ಜಿಲ್ಲೆಗಳ ಪ್ರವಾಸಿಗರು ಸ್ವಯಂಪ್ರೇರಿತವಾಗಿ ಕಾಫಿನಾಡಿಗೆ ಪ್ರವಾಸಕ್ಕೆ ಬರಬಾರದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಮನವಿ ಮಾಡಿದರು.

ಜಿಲ್ಲೆಯ ಜನರ ಹಿತದೃಷ್ಟಿಯಿಂದ ಏ.15ರವರೆಗೆ ಇಲ್ಲಿನ ಪ್ರವಾಸಿ ತಾಣಗಳ (ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ, ಕೆಮ್ಮಣ್ಣುಗುಂಡಿ, ಶೃಂಗೇರಿ...) ದರ್ಶನಕ್ಕೆ ಪ್ರವಾಸಿಗರು ಬರಬಾರದು ಎಂಬುದು ನಮ್ಮ ಕೋರಿಕೆ. ಸಮುದಾಯಕ್ಕೆ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಈ ಸಲಹೆಯನ್ನು ಪರಿಗಣಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಭದ್ರಾ ವನ್ಯಜೀವಿ ವಲಯದಲ್ಲೂ ಸಫಾರಿ, ಮೊದಲಾದವನ್ನು ತಾತ್ಕಾಲಿಕವಾಗಿ ಬಂದ್‌ ಮಾಡುವಂತೆ ಉಪ ಅರಣ್ಯಸಂರಕ್ಷಣಾಧಿಕಾರಿಗೆ ಸೂಚಿಸಲಾಗುವುದು. ಕೊರೊನಾ ವೈರಸ್‌ ಸೋಂಕು ಶಂಕೆ ಮೇರೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ಎರಡೂ ಪ್ರಕರಣಗಳ ವರದಿ ಕೈಸೇರಿದೆ. ಸೋಂಕು ಇರುವುದು ದೃಢಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT