ಸಿ.ಟಿ.ರವಿ, ಕುಮಾರಸ್ವಾಮಿ ಪ್ರತಿಭಟನೆ

7

ಸಿ.ಟಿ.ರವಿ, ಕುಮಾರಸ್ವಾಮಿ ಪ್ರತಿಭಟನೆ

Published:
Updated:

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ರಸ್ತೆ, ಸೇತುವೆಗಳು ಹಾಳಾಗಿದ್ದು, ಅಪಾರ ಪ್ರಮಾಣದಲ್ಲಿ ವಾಣಿಜ್ಯ ಬೆಳೆಗಳೂ ನಷ್ಟವಾಗಿರುವುದರಿಂದ ತಕ್ಷಣವೇ ಜಿಲ್ಲೆಗೆ ಪರಿಹಾರ ಘೋಷಿಸಬೇಕು ಎಂದು ಶಾಸಕ ಸಿ.ಟಿ.ರವಿ ಮತ್ತು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಬುಧವಾರ ವಿಧಾನಸೌಧದ ಕೆಂಗಲ್‌ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

 ಚಿಕ್ಕಮಗಳೂರಿನಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿಗಳಲ್ಲಿ 24 ಇಂಚುಗಳಿಗೂ ಅಧಿಕ ಮಳೆಯಾಗಿದೆ. ಜಿಲ್ಲೆಯ ಪ್ರಮುಖ ಬೆಳೆಗಳಾದ ಕಾಫಿ, ಏಲಕ್ಕಿ, ಮೆಣಸು ಹಾಳಾಗಿವೆ. ಆದ್ದರಿಂದ ಜಿಲ್ಲೆಯನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಿಸುವಂತೆ ಸಿ.ಟಿ.ರವಿ ಆಗ್ರಹಿಸಿದರು.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !