ಶುಕ್ರವಾರ, ಜುಲೈ 30, 2021
28 °C

ತೀರ್ಥಹಳ್ಳಿ | ಮಗುವಿಗೆ ಮಂಗನ ಕಾಯಿಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೀರ್ಥಹಳ್ಳಿ: ತಾಲ್ಲೂಕಿನಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಕುಡುಮಲ್ಲಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆಲ್ಲಿಸರ ಗ್ರಾಮದ 1 ವರ್ಷ 9 ತಿಂಗಳ ಮಗುವಿಗೆ ಕೆಎಫ್‌ಡಿ ಇರುವುದು ಬುಧವಾರ ದೃಢಪಟ್ಟಿದೆ.

ಈ ವರ್ಷ 2 ವರ್ಷಕ್ಕಿಂತ ಚಿಕ್ಕ ಮಗುವಿಗೆ ಸೋಂಕು ತಗುಲಿರುವ ಪ್ರಥಮ ಪ್ರಕರಣ ಇದಾಗಿದೆ. ಮಗುವಿಗೆ ಪಟ್ಟಣದ ಜೆ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ವರ್ಷ 1 ವರ್ಷ 6 ತಿಂಗಳ ಮಗುವಿಗೆ ಸೋಂಕು ತಗುಲಿತ್ತು.

ನೆಲ್ಲಿಸರ ಹಾಗೂ ಹೊದಲ–ಅರಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಿಂಗಳ ಹಿಂದೆ 20ಕ್ಕೂ ಹೆಚ್ಚು ಮಂಗಗಳು ಮೃತಪಟ್ಟಿದ್ದವು.

‘ಇದೇ ಗ್ರಾಮದ ಇಬ್ಬರು ಕಾಯಿಲೆಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ತಾಲ್ಲೂಕಿನಲ್ಲಿ 145 ಮಂದಿಗೆ ಕೆಎಫ್‌ಡಿ ಸೋಂಕು ತಗುಲಿದಂತಾಗಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು