ಬುಧವಾರ, ಅಕ್ಟೋಬರ್ 16, 2019
22 °C

ಚಿಂಚನಸೂರ್‌ ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ

Published:
Updated:
Prajavani

ಕಲಬುರ್ಗಿ: ಬಿಜೆಪಿ ಮುಖಂಡ ಬಾಬುರಾವ್‌ ಚಿಂಚನಸೂರ್ ಅವರನ್ನು ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ, ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಕೋಲಿ ಸಮುದಾಯ ಅಭಿವೃದ್ಧಿ ನಿಗಮವು ಸದ್ಯ ಸ್ಥಾಪನೆಯ ಹಂತದಲ್ಲಿದೆ. ಆದ್ದರಿಂದ ಈ ನಿಗಮ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡುವವರೆಗೂ ಚಿಂಚನಸೂರ್‌ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನ–ಮಾನ, ಸೌಲಭ್ಯಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಶಿಷ್ಟಾಚಾರ) ಒದಗಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Post Comments (+)