ಚಿಂಚೋಳಿ ಉಪ ಚುನಾವಣೆ: ಉಮೇಶ ಜಾಧವ ಮತ ಚಲಾವಣೆ

ಸೋಮವಾರ, ಜೂನ್ 17, 2019
28 °C

ಚಿಂಚೋಳಿ ಉಪ ಚುನಾವಣೆ: ಉಮೇಶ ಜಾಧವ ಮತ ಚಲಾವಣೆ

Published:
Updated:

ಕಲಬುರ್ಗಿ: ಚಿಂಚೋಳಿ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ ಜಾಧವ ಅವರ ತಂದೆ ಡಾ. ಉಮೇಶ ಜಾಧವ ಅವರು ಬೆಡಸೂರ ಗ್ರಾಮದ ಮತಗಟ್ಟೆ ಸಂಖ್ಯೆ 79ರಲ್ಲಿ ಪತ್ನಿ ಗಾಯತ್ರಿ ಸಮೇತ ಮತದಾನ ಮಾಡಿದರು.

ವಿಶೇಷ ಪೂಜೆ
ಡಾ. ಅವಿನಾಶ ಜಾಧವ ಅವರು ಮತದಾನಕ್ಕೂ ಮುನ್ನ ರೇವಗ್ಗಿಯ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಪತ್ನಿ ಮೇಘನಾ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ತಾಂತ್ರಿಕ ದೋಷ​ ಮತದಾನ ಸ್ಥಗಿತ
ಚಿಂಚೋಳಿ ತಾಲ್ಲೂಕು ರುಸ್ತಂಪುರ ಗ್ರಾಮದ ಮತಗಟ್ಟೆಯಲ್ಲಿ ಮತಯಂತ್ರ ಕೈಕೊಟ್ಟಿದ್ದು, ಮತದಾನ ಸ್ಥಗಿತವಾಗಿದೆ. 

ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ
ಕಲಬುರ್ಗಿ:
ಚಿಂಚೋಳಿ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ ಅವರು ರೇವಗ್ಗಿ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಚಿಂಚೋಳಿ ತಾಲ್ಲೂಕು ಬಡಿ ಶೇರಿ ತಾಂಡಾದಲ್ಲಿ ಇವರು ಮತ ಚಲಾಯಿಸಲಿದ್ದಾರೆ.


ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಗಾಜರೆ ಅವರು ಪತ್ನಿ ಶಶಿಕಲಾ ಅವರೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡಿದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !