ಸೋಮವಾರ, ಆಗಸ್ಟ್ 3, 2020
24 °C

ನಟ ಚಿರಂಜೀವಿ ಜೊತೆ ಸಂಸದೆ ಸುಮಲತಾ ಡಾನ್ಸ್: ವಿಡಿಯೊ ವೈರಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ತೆಲುಗು ನಟ ಚಿರಂಜೀವಿ ಜೊತೆ ಸಂಸದೆ ಎ.ಸುಮಲತಾ ಡ್ಯಾನ್ಸ್ ಮಾಡಿರುವ ವಿಡಿಯೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಚಿರಂಜೀವಿ ಅವರ ಜನ್ಮದಿನದ ಪಾರ್ಟಿಯಲ್ಲಿ ಭಾಗವಹಿಸಿದ್ದ ಸುಮಲತಾ ಡ್ಯಾನ್ಸ್ ಮಾಡಿದ್ದಾರೆ ಎಂಬ ಸಂದೇಶದೊಂದಿಗೆ ವಿಡಿಯೊ ಹರಿದಾಡುತ್ತಿದೆ. ಸುಮಲತಾ ಅವರ ಫೇಸ್ ಬುಕ್ ಖಾತೆಯಲ್ಲೇ ಈ ವಿಡಿಯೊ ಇದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ಚಿರಂಜೀವಿ–ಸುಮಲತಾ ಡಾನ್ಸ್ ವಿಡಿಯೊ 3 ವರ್ಷ ಹಳೇದು!

ರಾಜ್ಯದಲ್ಲಿ ಪ್ರವಾಹ ಸ್ಥಿತಿಯಿಂದ ಜನರು ಪರಿತಪಿಸುವಾಗ ಸುಮಲತಾ ಡ್ಯಾನ್ಸ್ ಮಾಡಿರುವುದಕ್ಕೆ ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಸುಮಲತಾ ಹೆಸರಿನ ನಕಲಿ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೊ ವೈರಲ್ ಆಗಿದೆ. ಕಿಡಿಗೇಡಿಗಳು ಹಳೆಯ ವಿಡಿಯೊ ಹರಿಬಿಟ್ಟಿದ್ದಾರೆ. ಈ ಸಂಬಂಧ ಸುಮಲತಾ ಸೈಬರ್ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ’ ಎಂದು ಬೆಂಬಲಿಗರು ತಿಳಿಸಿದ್ದಾರೆ.

ಈ ಸಂಬಂಧ ಸುಮಲತಾ ಅವರನ್ನು ಸಂಪರ್ಕಿಲು ಪ್ರಯತ್ನಿಸಿದರೂ ಅವರು ಫೋನ್ ಕರೆ ಸ್ವೀಕರಿಸಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು