ಗುರುವಾರ , ಫೆಬ್ರವರಿ 20, 2020
28 °C

ಆರ್‌ಎಫ್‌ಒ ಮನೆಯಲ್ಲಿ ಒಂದು ಕೆ.ಜಿ ಚಿನ್ನ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಇಲ್ಲಿನ ಕೋಟೆ ರಸ್ತೆಯಲ್ಲಿರುವ ವಲಯ ಅರಣ್ಯಾಧಿಕಾರಿ ರಾಮಮೂರ್ತಿ ಮನೆಯ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ತಂಡಕ್ಕೆ 950 ಗ್ರಾಂ ಚಿನ್ನ ಸಿಕ್ಕಿದೆ.

ಆದಾಯ ಮೀರಿ ಆಸ್ತಿ ಹೊಂದಿದ ಆರೋಪದ ಮೇಲೆ ಜಗಳೂರು ವಲಯ ಅರಣ್ಯಾಧಿಕಾರಿ ರಾಮಮೂರ್ತಿ ಅವರ ಮನೆ, ಕಚೇರಿ ಹಾಗೂ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಭಕ್ತನಕಟ್ಟೆ ಗ್ರಾಮದಲ್ಲಿನ ತೋಟದ ಮನೆ ಮೇಲೆ ಬುಧವಾರ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು.

ಮನೆಯಲ್ಲಿ ₹1.5 ಲಕ್ಷ ನಗದು, 600 ಗ್ರಾಂ ಬೆಳ್ಳಿ ಹಾಗೂ 35 ಎಕರೆ ಜಮೀನು ಮತ್ತು 10 ನಿವೇಶನಗಳ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಒಂದು ಸ್ಕಾರ್ಪಿಯೊ, ಬೊಲೆರೊ ಹಾಗೂ ಒಂದು ದ್ವಿಚಕ್ರ ವಾಹನಗಳನ್ನು ಎಸಿಬಿ ಡಿವೈಎಸ್ಪಿ
ಜಿ.ಮಂಜುನಾಥ ನೇತೃತ್ವದ ತಂಡ ವಶಕ್ಕೆ ಪಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು