ಚಿತ್ರದುರ್ಗ: ಶಾಸಕ ಸೇರಿ ಬಿಜೆಪಿ ಕಾರ್ಯಕರ್ತರ ಬಂಧನ

7
ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ

ಚಿತ್ರದುರ್ಗ: ಶಾಸಕ ಸೇರಿ ಬಿಜೆಪಿ ಕಾರ್ಯಕರ್ತರ ಬಂಧನ

Published:
Updated:

ಚಿತ್ರದುರ್ಗ: ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ನಿಷೇಧಾಜ್ಞೆ ಉಲ್ಲಘಿಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದರು. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ವಿಭಾಗೀಯ ಪ್ರಮುಖ ಜಿ.ಎಂ.ಸುರೇಶ್ ಸೇರಿ ಹಲವು ಮುಖಂಡರು ಬಂಧನಕ್ಕೆ ಒಳಗಾದರು.

ನಿಷೇಧಾಜ್ಞೆಯ ನಡುವೆ ಬಿಜೆಪಿ ಕಾರ್ಯಕರ್ತರು ಜೋಗಿಮಟ್ಟಿ ರಸ್ತೆಯಲ್ಲಿ ಜಮಾಯಿಸಿದರು. ಅಲ್ಲಿಂದ ಮದಕರಿ ನಾಯಕ ವೃತ್ತಕ್ಕೆ ಜಾಥಾ ಹೊರಡಲು ಮುಂದಾದ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದರು. ಕೆಎಸ್ಆರ್‌ಟಿಸಿ ಬಸ್ ಹಾಗೂ ಪೊಲೀಸ್ ವಾಹನದಲ್ಲಿ ಐಮಂಗಲ ಪೊಲೀಸ್ ತರಬೇತಿ ಶಾಲೆ ಆವರಣಕ್ಕೆ ಕರೆದೊಯ್ಯಲಾಯಿತು. ಮದಕರಿ ನಾಯಕ ವೃತ್ತದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಖಾಕಿ ಪಡೆಯ ಸರ್ಪಗಾವಲು ಹಾಕಲಾಗಿದೆ.

ಬರಹ ಇಷ್ಟವಾಯಿತೆ?

 • 8

  Happy
 • 2

  Amused
 • 1

  Sad
 • 0

  Frustrated
 • 4

  Angry

Comments:

0 comments

Write the first review for this !