ಸೋಮವಾರ, ಜುಲೈ 26, 2021
21 °C
ಸಚಿವ ಈಶ್ವರಪ್ಪ ಭೇಟಿ ಸಂದರ್ಭದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಪದವೀಧರೆ

ಹೊಳಲ್ಕೆರೆ: ಕೂಲಿ ಕೆಲಸಕ್ಕೆ ಬಂದ ಎಂಎಸ್ಸಿ ಪದವೀಧರೆಗೆ ಉದ್ಯೋಗದ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳಲ್ಕೆರೆ: ತಾಲ್ಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂ.ಎಸ್ಸಿ ಪದವೀಧರೆ ದೀಪಶ್ರೀ ನರೇಗಾ ಯೋಜನೆಯಲ್ಲಿ ಕೂಲಿ ಕೆಲಸ ಮಾಡಲು ಬರುತ್ತಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಗಣಿತ ವಿಷಯದಲ್ಲಿ ಎಂ.ಎಸ್ಸಿ ಮಾಡಿರುವ ಇವರು ತಂದೆ–ತಾಯಿಯೊಂದಿಗೆ ನಿತ್ಯ ಬದು ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

‘ಉಪನ್ಯಾಸಕಿ ಆಗುವ ಬಯಕೆ ಇದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ತಂದೆ–ತಾಯಿಗೆ ನೆರವಾಗುವ ಉದ್ದೇಶದಿಂದ ನರೇಗಾ ಕೂಲಿ ಕೆಲಸ ಮಾಡುತ್ತಿದ್ದೇನೆ’ ಎಂದು ದೀಪಶ್ರೀ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಶುಕ್ರವಾರ ನರೇಗಾ ಕಾಮಗಾರಿ ವೀಕ್ಷಿಸುವಾಗ ವಿದ್ಯಾರ್ಥಿನಿಯ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

‘ಕೊರೊನಾ ಬಿಕ್ಕಟ್ಟು ಮುಗಿದ ನಂತರ ವಿದ್ಯಾರ್ಥಿನಿಗೆ ನನ್ನನ್ನು ಸಂಪರ್ಕಿಸಲು ವ್ಯವಸ್ಥೆ ಮಾಡಿ. ಯಾವುದಾದರೂ ಉದ್ಯೋಗ ಕೊಡಿಸುತ್ತೇನೆ’ ಎಂದು ಸಚಿವರು ಜಿಲ್ಲಾ ಪಂಚಾಯಿತಿ ಸಿಇಒ ಯೋಗೀಶ್ ಅವರಿಗೆ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು